ಸಂಡೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಿಗೆ ಅಭಿನಂದನೆ… ಸಲ್ಲಿಸಿದ ಡಾ.ಶ್ರೀನಿವಾಸ್ ಎನ್ ಟಿ ರವರು ಹಾಗೂ ಮುಖಂಡರುಗಳು
ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ ಶ್ರೀಮತಿ ಅನ್ನಪೂರ್ಣ ತುಕಾರಾಮ್ ರವರನ್ನು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಹಾಗೂ ಮುಖಂಡರು ಬೈಕ್ ರ‍್ಯಾಲಿ ಮುಖಾಂತರ ಕೂಡ್ಲಿಗಿ ತಾಲೂಕಿನಿಂದ ಸಂಡೂರು ಪಟ್ಟಣಕ್ಕೆ ಆಗಮಿಸಿ ಅಭಿನಂದಿಸಿದರು.
ಇದಕ್ಕೂ ಮುನ್ನ ನೂತನ ವಿಧಾನಸಭಾ ಸದಸ್ಯರಾದ ಶ್ರೀಮತಿ ಅನ್ನಪೂರ್ಣ ತುಕಾರಾಂ ಮಾತನಾಡಿ, ನನ್ನ ಗೆಲುವಿಗೆ ಶ್ರಮಿಸಿದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರಿಗೂ ಹಾಗೂ ಕೂಡ್ಲಿಗಿ ಕ್ಷೇತ್ರದ ಎಲ್ಲಾ ಮುಖಂಡರಿಗೂ ಧನ್ಯವಾದ ತಿಳಿಸಿದರು. ಹಾಗೆಯೇ ನಾನು ಶಾಸಕಿಯಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಈ.ತುಕಾರಾಂ ರವರು ಹಾಗೂ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ.ತಿಪ್ಪೇಸ್ವಾಮಿಯವರು &ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್ ವೆಂಕಟೇಶ್ ರವರು ಹಾಗೂ ಕೂಡ್ಲಿಗಿ ಕ್ಷೇತ್ರದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು…
ವರದಿ, ಅನಿಲ್ ಕುಮಾರ್ ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030