ಶಾಲಾ ಮಕ್ಕಳೊಂದಿಗೆ ಶಾಸಕ ಡಾ. ಶ್ರೀನಿವಾಸ್. ಎನ್. ಟಿ. ಅವರ ಜನ್ಮ ದಿನಾಚರಣೆ…
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರ ಜನ್ಮ ದಿನಾಚರಣೆಯನ್ನು ಗುಣಸಾಗರದ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಮುಖಂಡರಾದ ಕೊಟ್ರೇಶ ಅವರು ಸೇರಿದಂತೆ ಈ ದಿನ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪೆನ್ನು ಕೊಟ್ಟು ಅರ್ಥಪೂರ್ಣವಾಗಿ ಆಚರಿಸಿದರು. ಶಾಸಕರು ಈ ಸಂದರ್ಭದಲ್ಲಿ ಮಾತನಾಡಿ, ಇಲ್ಲಿನ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಒಳ್ಳೆಯ ಕಡೆ ಜಾಗವನ್ನು ಗುರುತಿಸಿ ಹೊಸದಾಗಿ ಶಾಲಾ ಕಟ್ಟಡವನ್ನು ನಿರ್ಮಿಸೋಣ ಎಂದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು…
ವರದಿ, ಅನಿಲ್ ಕುಮಾರ್, ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030