ಇಂದು ಗಂಡ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ರಗುಂಡಲಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಶಾಲಾ ಉಸ್ತುವಾರಿ ಸಮಿತಿ ಹೊಸದಾಗಿ ರಚಿಸಲು ಸಭೆಯನ್ನು ಕರೆಯಲಾಗಿತ್ತು ಇದರಲ್ಲಿ 18 ಜನ ಸದಸ್ಯರನ್ನು ಮೊದಲು ಆಯ್ಕೆ ಮಾಡಿ ನಂತರ ಅಧ್ಯಕ್ಷರಾಗಿ ಸಣ್ಣ ಮಾರಯ್ಯ ತಂದೆ ಗಿಡ್ಡನಿಂಗಯ್ಯ ಮತ್ತು ಉಪಾಧ್ಯಕ್ಷರಾಗಿ ಮೀನಾಕ್ಷಿ ಗಂಡ ಬಿ ನಾಗರಾಜ ಇವರನ್ನು ಆಯ್ಕೆ ಮಾಡಲಾಯಿತು ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಆರ್ ಬಸವರಾಜ್ ರವರು ಮಾತನಾಡಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭಾಶಯಗಳನ್ನು ತಿಳಿಸುತ್ತಾ ಕಾಲಕಾಲಕ್ಕೆ ಸಭೆಗಳನ್ನು ಕರೆದು ಶಿಕ್ಷಕರೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು ಈ ಸಂದರ್ಭದಲ್ಲಿ ಊರಿನ ಮುಖಂಡರು ಪಾಲಕರು ಪೋಷಕರು ಮತ್ತು ಶಾಲೆಯ ಮುಖ್ಯ ಗುರುಗಳಾದ ಜಾಫರ್ ಮತ್ತು ಸಹ ಶಿಕ್ಷಕಿಯರಾದ ಇಂದಿರಮ್ಮ ಇವರು ಭಾಗವಹಿಸಿದ್ದರು…
ವರದಿ. ಅನಿಲ್ ಕುಮಾರ್, ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030