ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ಪಣತೊಟ್ಟ ಶಾಸಕ ಡಾ. ಶ್ರೀನಿವಾಸ್ ಎನ್ ಟಿ ರವರ ಕಾರ್ಯಕ್ಕೆ ಸಿಎಂ ಶ್ಲಾಘನೀಯ
ರಾಜ್ಯದ ನಾಲ್ಕು ಜಿಲ್ಲೆಗಳ ಜೀವನಾಡಿ ಆಗಿರುವ ತುಂಗಭದ್ರ ಅಣೆಕಟ್ಟು ಭರ್ತಿಯಾಗಿರುವುದರಿಂದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಸನ್ಮಾನ್ಯ ಉಪ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ರವರು ದಿನಾಂಕ 22.9.2024ರಂದು ಬಾಗಿನ ಸಮರ್ಪಣೆ ತುಂಗಭದ್ರಾ ಜಲಾಶಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಮಹತ್ವಕಾಂಕ್ಷಿ ಯೋಜನೆಯ ರಾಜವಾಳ ಗ್ರಾಮದ ಭೂ ಸಂತ್ರಸ್ತ ರೈತ ಫಲಾನುಭವಿಗಳಿಗೆ ಚೆಕ್ ಹಾಗೂ ತಾಲೂಕಿನ ವಿದ್ಯಾರ್ಥಿಗಳಿಗೆ 371 (ಜೆ) ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ ಮಾನ್ಯ ಮುಖ್ಯಮಂತ್ರಿಗಳು ವಿತರಿಸಿದರು.
ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ 371 (ಜೆ)ಪ್ರಮಾಣ ಪತ್ರವನ್ನು ಪಡೆಯಲು ಕಚೇರಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರತ್ಯೇಕ ಸಭೆ ನಡೆಸಿ 371 ( ಜೆ) ಅರ್ಹರಿಗೆ ಮುಟ್ಟಬೇಕು.ಈ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಗಮನಹರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಅಲೆದಾಡುವುದು ತಪ್ಪಿದಂತಾಗಿದೆ. ಡಾ. ನಂಜುಂಡಪ್ಪ ವರದಿ ಮಾದರಿ ಅನುಷ್ಠಾನದಂತೆ ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ಶ್ರಮಿಸುತ್ತಿರುವ ಡಾ.ಶ್ರೀನಿವಾಸ್ ಎನ್ ಟಿ ರವರ ಕಾರ್ಯವೈಖರಿ ಮತ್ತು ಕ್ಷೇತ್ರದ ಅಭಿವೃದ್ಧಿಯ ಕಾಳಜಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ಲಾಘನೀಯ ವ್ಯಕ್ತಪಡಿಸಿದರು…
ವರದಿ, ಅನಿಲ್ ಕುಮಾರ್, ಹುಲಿಕುಂಟೆ ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030