ನಿಂಬಳಗೆರೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ…!!!

Listen to this article

ನಿಂಬಳಗೆರೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಕೊಟ್ಟೂರು ತಾಲೂಕಿನ ನಿಂಬಳಗೆರೆಯ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಎನ್. ಜಿ. ಮಲ್ಲಿಕಾರ್ಜುನಗೌಡ್ರು ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಒಕ್ಕೂಟದ ನಿರ್ದೇಶಕರಾದ ಶ್ರೀ ಮರುಳ ಸಿದ್ದಪ್ಪ ಈ ಕಾರ್ಯಕ್ರಮದಲ್ಲಿ ವಾರ್ಷಿಕ ಸಾಮಾನ್ಯ ಸಭೆಯ ಆಯವ್ಯಯದ ಸಂಪೂರ್ಣ ಮಾಹಿತಿಯನ್ನು ನೀಡುತ್ತಾ ರೈತರಿಗೆ ಪಶುಗಳ ಪೋಷಣೆ ಹಾಗೂ ಪಾಲನೆ ಹಾಲು ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ಅದಕ್ಕೆ ಪೂರಕವಾದ ಮಾಹಿತಿಯನ್ನು ನೀಡುತ್ತಾ ರೈತರ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿದರು
ಕಾರ್ಯಕ್ರಮದ ಅಧ್ಯಕ್ಷರಾದ ಎನ್. ಜಿ. ಮಲ್ಲಿಕಾರ್ಜುನಗೌಡ ಮಾತನಾಡುತ್ತಾ ಒಕ್ಕೂಟದ ಜವಾಬ್ದಾರಿಯುತ ಅಧಿಕಾರಿಗಳು ಹಾಗೂ ಸಂಘದ ಅಧ್ಯಕ್ಷ ಅಧಿಕಾರಿಯಾಗಿ ಎಲ್ಲ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ತಮ್ಮ ಜವಾಬ್ದಾರಿಯನ್ನು ಪಾರದರ್ಶಕವಾಗಿ ನಿರ್ವಹಿಸುತ್ತಾ ರೈತರ ಪರವಾಗಿ ರೈತರ ಧ್ವನಿಯಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು ಇತ್ತೀಚಿನ ದಿನಗಳಲ್ಲಿ ನಮ್ಮ ದೇಸಿ ಹಸುಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಅದರ ಉತ್ಪಾದನೆಯ ಹಾಲು ಬೆಣ್ಣೆ ತುಪ್ಪಕ್ಕೂ ಹೆಚ್ಚಿನ ಬೇಡಿಕೆ ಇದೆ ಜೊತೆಗೆ ನಮ್ಮ ಪರಂಪರೆಯನ್ನು ಉಳಿಸುವ ಹಿನ್ನೆಲೆಯಲ್ಲಿ ಹಸುಗಳ ರಕ್ಷಣೆ ಮಾಡುವುದರ ಜೊತೆಗೆ ತಮ್ಮ ಕೌಟುಂಬಿಕ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ರೈತರಿಗೆ ಕಿವಿಮಾತು ಹೇಳಿದರು
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಾಲು ಉತ್ಪಾದಕರ ಸಂಘದಿಂದ ಕೌಟುಂಬಿಕ ಪ್ರೋತ್ಸಾಹಕ್ಕಾಗಿ ಹಾಲು ಹಾಕುವ ಸದಸ್ಯರ ಮಕ್ಕಳಿಗೆ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಬಿ. ಜೀವನ್ ಮತ್ತು ಎಂ. ಹೆಚ್. ಸ್ಪಂದನ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಎಂ.ಎಚ್ .ಸಂದೀಪ್ ಜಿ. ಸಿಂಧು ಈ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
ಸಂಘದ ಬಲವರ್ತನೆಗಾಗಿ ದಿವಂಗತ ಬಾರಿ ಚೆನ್ನಮ್ಮ ಮತ್ತು ಬಾರಿ ಬಸಣ್ಣ ಇವರ ಸ್ಮರಣಾರ್ಥದವರು ಸಂಘಕ್ಕೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ ದಿವಂಗತ ಎಂ.ಜಿ .ಬಸವರಾಜ ಗೌಡ್ರು ವಿ ಎಸ್ ಎಸ್ ಎನ್ ನ ಮಾಜಿ ಅಧ್ಯಕ್ಷರು ಇವರ ಮಗನಾದ ಎನ್. ಜಿ. ಸಂದೀಪ್ ಗೌಡರು ಇವರು ತಂದೆಯ ಸ್ಮರಣಾರ್ಥ ಭಾಗವಹಿಸಿದ ಎಲ್ಲರಿಗೂ ನೆನಪಿನ ಸ್ಮರಣೆಗಳನ್ನು ನೀಡಿದರು ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಹನುಮಂತಪ್ಪ ಹಾಗೂ ಉಪ ವ್ಯವಸ್ಥಾಪಕರಾದ ಈ. ಪ್ರಕಾಶ್ ವಿಸ್ತಾರಣಾಧಿಕಾರಿಯದ ಶ್ರೀಮತಿ ಮಂಜುಳಾ ಎಚ್. ರಾಜಪ್ಪ ,ರುದ್ರೇಶ್ ಹಾಗೂ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಹಾಲು ಹಾಕುವ ಸರ್ವ ಸದಸ್ಯರು ಭಾಗವಹಿಸಿದ್ದರು.


ವರದಿ:- ಅನಿಲ್ ಕುಮಾರ್ ಹುಲಿಕುಂಟೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend