ಡಾ. ಬಿ. ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಕಾನ ಹೊಸಹಳ್ಳಿ: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕ್ರಮವನ್ನು ಖಂಡಿಸಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ಬಿಗಿದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿ.ಪಂ ಸದಸ್ಯ ರಾದ ಕೆಎಂ ಶಶಿಧರ್ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಅಣತಿಯಂತೆ ರಾಜ್ಯಪಾಲರು ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಖಂಡನೀಯ ಇದಕ್ಕೆ ಕಾನೂನು ಮೂಲಕವೇ ನಮ್ಮ ಪಕ್ಷ ಉತ್ತರ ನೀಡಲಿದ್ದು, ಈಗಾಗಲೇ ಸಿದ್ದರಾಮಯ್ಯ ಅವರುಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿ ಕಾರಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಪ್ರಕಾಶ್, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಪಿಎಲ್ ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಸತೀಶ್, ಲಕ್ಕಜ್ಜಿ ಮಲ್ಲಿಕಾರ್ಜುನ, ಡಿಎಸ್ಎಸ್ ಮುಖಂಡರಾದ ಟಿ ಗಂಗಾಧರ, ಬಿ.ಟಿ ಗುದ್ದಿ ದುರುಗೇಶ್, ಫೋಟೋ ಸಿದ್ದಲಿಂಗಣ್ಣ, ಸಿದ್ದನಗೌಡ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬೋರೆಯ್ಯ, ಕಾಂಗ್ರೆಸ್ ಮುಖಂಡ ಪಾಲಾಕ್ಷಿ, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಎಂ.ಎಸ್ ಮಂಜುನಾಥ್, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಯುವಕರು ಭಾಗಿಯಾಗಿದ್ದರು.
ವರದಿ : ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030