ಮುಂಗಾರು ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ ಡಾ. ಶ್ರೀನಿವಾಸ್ ಎನ್ ಟಿ
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ದಿನಾಂಕ 21.11.2024ರಂದು ಹುಲಿಕೆರೆ ಗ್ರಾಮಕ್ಕೆ ಭೇಟಿ ನೀಡಿ ನಿರಂತರವಾಗಿ ಮುಂಗಾರು ಧಾರಾಕಾರ ಮಳೆಯಿಂದಾಗಿ ಹಾನಿಯಾಗಿರುವ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ ವೀಕ್ಷಿಸಿದರು.
ಸ್ಥಳೀಯರೊಂದಿಗೆ ಸಮಾಲೋಚಿಸಿದ ಶಾಸಕರು ಸಾರ್ವಜನಿಕರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಕೆರೆ ನೀರಿನಿಂದ ಮುಳುಗಡೆಯಾಗಿ ಹಾನಿಗೊಳಗಾದ ಮನೆಗಳ ಮಾಹಿತಿಯನ್ನು ಪಡೆದು ಅಗತ್ಯ ಪರಿಹಾರ ನೀಡುವಂತೆ ಹಾಗೂ ಶಾಶ್ವತ ಸಮಸ್ಯೆ ನಿವಾರಣೆಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ತ್ವರಿತ ಕ್ರಮ ವಹಿಸಲಾಗುವುದು ಜೊತೆಗೆ ಮನೆ ಹಾನಿಗೊಳಗಾದ ಕುಟುಂಬಗಳಿಗೆ ದಿನಸಿ ಪದಾರ್ಥಗಳಿಗಾಗಿ ವೈಯಕ್ತಿಕವಾಗಿ ಆರ್ಥಿಕ ಧನಸಹಾಯ ನೀಡುತ್ತೇನೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಊರಿನ ಪ್ರಮುಖ ಮುಖಂಡರು ಹಾಗೂ ಉಪಸ್ಥಿತರಿದ್ದರು…
ವರದಿ. ಅನಿಲ್ ಕುಮಾರ್, ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030