ಕಾನಮಡುಗು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ…!!!

ಕಾನಮಡುಗು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕಾನಮಡಗು ಗ್ರಾಮದ ಶ್ರೀ ಶರಣಬಸವೇಶ್ವರ ದಾಸೋಹ ಮಠದಲ್ಲಿ ದಿನಾಂಕ 10.12.2024 ಮಂಗಳವಾರದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ವಿಜಯನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆಲೂರು, ಕಾನಮಡಗು ಶ್ರೀ ಶರಣ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಹಗರಿಬೊಮ್ಮನಹಳ್ಳಿ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರಾಥಮಿಕ ಆರೋಗ್ಯ ಕೇಂದ್ರ ಆಲೂರು ಹಾಗೂ ಶ್ರೀ ಶರಣಬಸವೇಶ್ವರ ಸ್ವಾಮಿಯ ದಾಸೋಹ ಮಠದ ಸದ್ಭಕ್ತರು ಸುತ್ತಮುತ್ತಲಿನ ಸರ್ವ ಭಕ್ತಾದಿಗಳು ಹಿರಿಯರು ಯುವಕರು ಸರ್ವ ಗ್ರಾಮಸ್ಥರು ಹಾಗೂ ಉಪಸ್ಥಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತವಾಗಿ ಯಾವುದೇ ಫಲ ಪ್ರೇಕ್ಷ ಇಲ್ಲದೆ ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

ವರದಿ: ಅನಿಲ್ ಕುಮಾರ್ ಹುಲಿಕುಂಟೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *