ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಮನವಿ
ನೆನ್ನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯಕಾರಿಣಿ ಸಭೆಯ ನಿರ್ಣಯ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ಣಯ ದಂತೆ ಈ ದಿನ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರವರಿಗೆ ಮಾನ್ಯ ತಹಶೀಲ್ದಾರರುಕೂಡ್ಲಿಗಿ ರವರ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ತಾಲೂಕು ಗ್ರಾಮ ಆಡಳಿತಾಧಿಕಾರಿ ಸಂಘದ ಅಧ್ಯಕ್ಷರಾದ ಮರುಳಸಿದ್ದಪ್ಪ ಗ್ರಾಮ ಆಡಳಿತಾಧಿಕಾರಿಗಳ ಮೂಲಭೂತ ಸೌಕರ್ಯ ಒದಗಿಸಬೇಕು ಜೊತೆಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.
ಇಂದು ಕೂಡ್ಲಿಗಿ ತಾಲೂಕು ಘಟಕದಿಂದ ಕೂಡ್ಲಿಗಿ ಗ್ರೇಡ್- 2 ತಹಶೀಲ್ದಾರ್ ನೇತ್ರಾವತಿ ಇವರ ಮುಖಾಂತರ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು ಎಂದು ಸಂಘದ ಅಧ್ಯಕ್ಷರಾದ ಮರಳು ಸಿದ್ದಪ್ಪ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಕೂಡ್ಲಿಗಿ ತಾಲೂಕು ಘಟಕ ಉಪಾಧ್ಯಕ್ಷರಾದ ಶ್ರೀನಿವಾಸಕೊಂಡಿ,ಗೌರವಾಧ್ಯಕ್ಷರಾದ ಚನ್ನಬಸಯ್ಯ ತಾಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ಹಾಜರಿದ್ದರು..
ವರದಿ. ಎಂ. ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030