ಆರೋಗ್ಯ ಕ್ಷೇತ್ರದಲ್ಲಿ ಸಾಮಾಜಿಕ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ.
ವಿಜಯನಗರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದಿ; 22-10-2024 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸನ್ಮಾನ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಜಯ ನಗರ ಮತ್ತು ಕೊಪ್ಪಳ ಜಿಲ್ಲೆಗಳ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಆರೋಗ್ಯ ಕ್ಷೇತ್ರದಲ್ಲಿ ಸಾಮಾಜಿಕ ಸುಧಾರಣೆ ತರುವ ನಿಟ್ಟಿನಲ್ಲಿ ಹಲವಾರು ಸಮಸ್ಯೆಗಳನ್ನು ಕೈಗೆ ಎತ್ತಿಕೊಂಡು ಚರ್ಚಿಸಿದರು.
ಶಾಸಕರು ಮಾತನಾಡುತ್ತಾ, ನಮ್ಮಲ್ಲಿ ವಿಶೇಷವಾದ ಖಾಯಿಲೆಗೆ ಒಳಪಟ್ಟವರು ಬಳ್ಳಾರಿ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಮಣಿಪಾಲ್ ಗೆ ಹೋಗುತ್ತಾರೆ. ಆದರೆ ನಮ್ಮಲ್ಲಿ ಸ್ಥಳೀಯವಾಗಿ ಅವರಿಗೆ ಹೆಚ್ಚಿನ ಔಷಧಿಯ ಸೌಲಭ್ಯಗಳು ಪಡೆಯುವಂತೆ ಆಗಬೇಕು ಎಂದೂ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಇನ್ನೂ ಹೆಚ್ಚಿನ ರೀತಿಯಲ್ಲಿ ನಮ್ಮ ಭಾಗದ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ವೈದ್ಯರು ಮತ್ತು ನಸ್೯ಗಳ ಅವಶ್ಯಕತೆ ಇದೆ ಎಂದೂ ಹೇಳಿದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಕ್ರಮಬದ್ಧವಾಗಿ ಗುಣಮಟ್ಟದ ಆಹಾರವನ್ನು ಕೊಡಬೇಕು ಎಂದೂ ಅಧಿಕಾರಿಗಳಿಗೆ ಸೂಚಿಸಿದರು.
ಬೇರೆ ತಾಲೂಕುಗಳಿಗೆ ಹೋಲಿಸಿದರೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ನಮ್ಮ ತಾಲೂಕಿನಲ್ಲಿ ಅತಿ ಕಡಿಮೆ ಇವೆ ನಿತ್ಯ ನಮ್ಮ ಹತ್ತಿರ ಆರೋಗ್ಯದಲ್ಲಿ ತೊಂದರೆಯಲ್ಲಿರುವ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ.
ಹಳ್ಳಿಗಳಲ್ಲಿ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ 6 ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಉನ್ನತ ಮಟ್ಟದಲ್ಲಿ ಸಹಕಾರ ಕೊಡಬೇಕು ಎಂದೂ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ, ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಬಸವರಾಜ ರಾಯರೆಡ್ಡಿ, ಕೊಪ್ಪಳ ವಿಧಾನ ಕ್ಷೇತ್ರದ ಮಾನ್ಯ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್, ಹೊಸಪೇಟೆ ನಗರದ ಮಾನ್ಯ ಶಾಸಕರಾದ ಹೆಚ್. ಆರ್. ಗವಿಯಪ್ಪ, ಹೂವಿನ ಹಡಗಲಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕೃಷ್ಣನಾಯ್ಕ್ , ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಹರ್ಷಗುಪ್ತಾ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಶಿವಕುಮಾರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ. ಎಸ್. ದಿವಾಕರ್, ವಿಜಯ ನಗರ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಕೊಪ್ಪಳ ಮತ್ತು ವಿಜಯ ನಗರ ಜಿಲ್ಲೆಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು, ಇನ್ನೂ ಮುಂತಾದವರು ಉಪಸ್ಥಿತರಿದ್ದರು…
ವರದಿ. ಅನಿಲ್ ಕುಮಾರ್, ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030