ಎಪಿಎಂಸಿ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು: ಡಾ. ಶ್ರೀನಿವಾಸ್ ಎನ್ ಟಿ
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ಕೂಡ್ಲಿಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ದಿನಾಂಕ 21.11.2024 ರಂದು ರೈತ ಮುಖಂಡರು ಹಾಗೂ ವರ್ತಕರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ಮಾರುಕಟ್ಟೆ ನಿಯಂತ್ರಣ ಕಾಯ್ದೆ ಎಪಿಎಂಸಿ ಅಧೀನಕ್ಕೆ ಒಳಪಟ್ಟ ಮಳಿಗೆ ಮತ್ತು ಗೋಧಾಮಗಳನ್ನ ಕೃಷಿ ಉತ್ಪನ್ನಗಳ ಸಂಗ್ರಹ ಮತ್ತು ಮಾರಾಟಕ್ಕೆ ಮಾತ್ರ ಅವಕಾಶವಿರಬೇಕು. ಗ್ರಾಮೀಣ ಭಾಗದಲ್ಲಿ ನಡೆಯುವ ಅನಧಿಕೃತ ಕಾನೂನುಬಾಹಿರ ವ್ಯವಹಾರಕ್ಕೆ ಕಡಿವಾಣ ಹಾಕಬೇಕು. ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಮಾಡಬೇಕು , ಮಳಿಗೆ ಮತ್ತು ಗೋಧಾಮಗಳನ್ನು ಕೃಷಿ ಉತ್ಪನ್ನ ಮಾರಾಟಕ್ಕೆ ಮಾತ್ರ ಬಳಸಬೇಕು ಬೇರೆ ರೀತಿಯ ಸಾಮಗ್ರಿಗಳನ್ನು ಮಾರಾಟ ಮಾಡಬಾರದು ಹಾಗೂ ರೈತರಿಗೆ ತೂಕ ಮತ್ತು ಅಳತೆಯಲ್ಲಿ ಯಾವುದೇ ಮೋಸ ಆಗಬಾರದು ರೈತರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಬೇಕಾಗುವ ಎಲ್ಲಾ ಸಹಕಾರವನ್ನು ನಾನು ಪ್ರಾಮಾಣಿಕವಾಗಿ ಸರ್ಕಾರ ಮಟ್ಟದಲ್ಲಿ ಮಾಡುತ್ತೇನೆ ಎಂದು ಕಾರ್ಯದರ್ಶಿಗೆ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ವರ್ತಕರು ಉಪಸ್ಥಿತರಿದ್ದರು…
ವರದಿ. ಎಂ, ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030