ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿಯ ಉದ್ದೇಶ ಡಾ. ಶ್ರೀನಿವಾಸ್. ಎನ್. ಟಿ
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ದಿ: 25.11.2024ರಂದು ಕೂಡ್ಲಿಗಿ ಪಟ್ಟಣದ ಜ್ಞಾನಭಾರತಿ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪ್ರತಿಭಾಕಾರಂಜಿ ಹಾಗೂ ಕಲೋತ್ಸಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,” *ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ” ವಿದ್ಯಾರ್ಥಿಗಳಲ್ಲಿ ಅಡಗಿರುವ ಸ್ಥಳೀಯ ಕಲೆಗಳನ್ನು & ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆಯಾಗಿದೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ನೋಡಿಕೊಳ್ಳಬೇಕು ಜೊತೆಗೆ ಸಾಂಸ್ಕೃತಿಕ ವೈಭವವನ್ನು ಗಟ್ಟಿಗೊಳಿಸುವ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೆ ತಿಪ್ಪೇಸ್ವಾಮಿಯವರು, ಪ. ಪಂ. ಅಧ್ಯಕ್ಷರು ಕಾವಲಿ ಶಿವಣ್ಣನವರು & ಮುಖಂಡರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು…
ವರದಿ, ಎಂ, ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030