ಸರ್ಕಾರಿ ಶಾಲಾ ಮಕ್ಕಳ ಭವಿಷ್ಯದ ಭದ್ರಬುನಾದಿಯಾಗಿ ಕೆಲಸ ನಿರ್ವಹಿಸುವಂತೆ ಶಿಕ್ಷಕರಿಗೆ ಕಿವಿ ಮಾತು ಹೇಳಿದ : ಡಾ. ಶ್ರೀನಿವಾಸ್. ಎನ್. ಟಿ…!!!

Listen to this article

ಸರ್ಕಾರಿ ಶಾಲಾ ಮಕ್ಕಳ ಭವಿಷ್ಯದ ಭದ್ರಬುನಾದಿಯಾಗಿ ಕೆಲಸ ನಿರ್ವಹಿಸುವಂತೆ ಶಿಕ್ಷಕರಿಗೆ ಕಿವಿ ಮಾತು ಹೇಳಿದ : ಡಾ. ಶ್ರೀನಿವಾಸ್. ಎನ್. ಟಿ
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ ರವರು ದಿ:26.11.2024 ರಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿಗಳ ಸಮನ್ವಯ ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇದಕ್ಕೂ ಮೊದಲು ಭಾರತದ ಸಂವಿಧಾನದ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಭಾರತೀಯ ನಾಗರಿಕರಿಗೆ ಹಕ್ಕುಗಳನ್ನು ಹಾಗೂ ಕಾನೂನುಗಳನ್ನು ವಿವರಿಸುವ ದಾಖಲೆ ತೋರಿಸುವಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸುವ ಈ ವ್ಯಕ್ತಿಯ ಶ್ರಮವನ್ನು ಈ ದಿನದಂದು ನೆನಪಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ,ಸದಸ್ಯರುಗಳು ಹಾಗೂ ಸರ್ಕಾರಿ ಶಾಲಾ ಶಿಕ್ಷಕರು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳ ಭವಿಷ್ಯದ ಬದುಕು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಅದಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಅತ್ಯವಶ್ಯಕವಾಗಿದೆ.
ವಿದ್ಯಾರ್ಥಿಗಳು ಶಿಕ್ಷಕರ ಮಾತು ಕೇಳುತ್ತಾರೆ ಶಿಕ್ಷಕರ ಆದರ್ಶ ಗುಣಗಳಿಂದ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ನಾನು ಕೂಡ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದಿದವನು ಅದಕ್ಕಾಗಿ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಪರಿಚಯವಿದೆ. ಈ ಮೊದಲು ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಿತ್ತು. ಜಾಗತೀಕರಣದ ನಂತರ ಪ್ರತಿಯೊಬ್ಬ ವ್ಯಕ್ತಿಯೂ ವಿಶ್ವಮಾನವನಾಗಿ ಬೆಳೆಯಬಹುದಾಗಿದೆ. ಪೋಷಕಾಂಶಯುಕ್ತ ಉತ್ತಮ ಆಹಾರ, ಒಳ್ಳೆಯ ಶಿಕ್ಷಣ, ಇತ್ಯಾದಿ ಪೂರಕ ಅಂಶಗಳನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ,ಯಾವ ರೀತಿ ಮಕ್ಕಳನ್ನು ಬೆಳೆಸಬೇಕು ಸುಶಿಕ್ಷಿತರನ್ನಾಗಿ ಮಾಡಬೇಕು ಎನ್ನುವ ಪ್ರಶ್ನೆ ನಮ್ಮ ಮುಂದಿದೆ. ಅದೇ ರೀತಿಯಲ್ಲಿ ಹೆತ್ತವರು, ಶಿಕ್ಷಕರು, ನೆರೆಯವರು, ಶಾಲಾ ಅಭಿವೃದ್ಧಿ ಸಮಿತಿಯವರು ಮಕ್ಕಳ ಸರ್ವತೋಭಿಮುಖ ಬೆಳವಣಿಗೆಗೆ ಬೇಕಾದ ಸಾರವನ್ನು ಪಸರಿಸಲು ಇಂಬು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಉಮೇಶ್ ಜಿ ಗಂಗವಾಡಿ ಎಸ್‌ಡಿಎಂಸಿ ರಾಜ್ಯಾಧ್ಯಕ್ಷರು, ಗುನ್ನಳ್ಳಿ ರಾಘವೇಂದ್ರ, ಪದ್ಮನಾಭ ಕರಣಂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು…

ವರದಿ. ಎಂ. ಬಸವರಾಜ್ ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend