ಬಣವಿಕಲ್ಲು ಶಾಲೆಗೆ ಭೇಟಿ ನೀಡಿದ ಶಾಸಕ ಡಾ.ಶ್ರೀನಿವಾಸ್ ಎನ್ ಟಿ .
ಕೂಡ್ಲಿಗಿ : , ತಾಲೂಕಿನ ಬಣವಿಕಲ್ಲು ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಈ ಶಾಲೆ ಮಕ್ಕಳು ಬಾಲಕರ ವಿಭಾಗದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುವತ್ತ ದಾಪುಗಾಲು ಹರಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದರು ಹಾಗಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಡಾ . ಶ್ರೀನಿವಾಸ್ ಎನ್ ಟಿ ರವರು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಅಭಿನಂದಿಸಿ ಶುಭಾಶಯಗಳನ್ನ ತಿಳಿಸಿ ನಂತರ ಮಕ್ಕಳನ್ನು ಉದ್ದೇಶಿಸಿ ಹೀಗೆ ಹೇಳಿದರು ಮಕ್ಕಳು ವಿದ್ಯಾಭ್ಯಾಸದ ಜೊತೆ ಜೊತೆಗೆ ಪ್ರಾಥಮಿಕ ಹಂತದಲ್ಲೇ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ವಹಿಸಿಬೇಕು ಮತ್ತು ಕ್ರೀಡೆಗಳು ಮನುಷ್ಯನ ಅವಿಭಾಜ್ಯ ಅಂಗವಾಗಿದೆ ಕಾರಣ ನಮ್ಮಗಳ ಉತ್ತಮ ಆರೋಗ್ಯಕ್ಕೆ ಹಾಗೂ ದೇಹ ಸದೃಢವಾಗಿಸಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದರು . ನಂತರ ಶಾಲಾ ಪರವಾಗಿ ಮಾನ್ಯ ಜನಪ್ರಿಯ ಶಾಸಕ ಡಾ . ಶ್ರೀನಿವಾಸ್ ಎನ್ ಟಿ ರವರಿಗೆ ಸನ್ಮಾನವನ್ನು ಸಲ್ಲಿಸಿದರು , ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕರು , ಸಹ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು , ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮದ ಅನೇಕ ಮುಖಂಡರುಗಳು ಇದ್ದರು…
ವರದಿ, ಎಂ, ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030