ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮ ನಿರ್ದೇಶನಗೊಂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರರು ಅಧಿಕಾರ ಸ್ವೀಕರಿಸಿದ್ದು ವಿಶೇಷವಾಗಿದೆ.
ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಹರಾಳು ನಂಜಪ್ಪ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರೆ, ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಎಂ. ಶಿವಣ್ಣ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ 15 ಸದಸ್ಯರು ಅಧಿಕಾರವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಕಾರ್ಯದರ್ಶಿ ವಿರಣ್ಣ, ಬಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ದಾರುಕೀಶ್, ಜಿಲ್ಲಾ ಕಾರ್ಯದರ್ಶಿ ಅಡಕಿ ಮಂಜುನಾಥ, ಮರಿಸ್ವಾಮಿ, ಕೊಟ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…
ವರದಿ. ವಿನಾಯಕ ಕೊಟ್ಟೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030