ಕೊಟ್ಟೂರು:
ನಾನು ಮತ್ತು ಕೂಡ್ಲಿಗಿ ಶಾಸಕ ಎನ್.ಟಿ ಶ್ರೀನಿವಾಸ ಸೇರಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರವರ ಜೊತೆಗೂಡಿ ಕೊಟ್ಟೂರು ಎಪಿಎಂಸಿ ಮಾರುಕಟ್ಟೆಗೆ ಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿ ಮೂಲ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮಾಜಿ ಶಾಸಕ ಭೀಮಾ ನಾಯ್ಕ್ ತಿಳಿಸಿದರು.
ಪಟ್ಟಣದ ಕೊಟ್ಟೂರು ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ನೂತನ ನಾಮ ನಿರ್ದೇಶನರಾದ ಅಧ್ಯಕ್ಷ ಮತ್ತು ಸದಸ್ಯರ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಶಾಸಕ ಭೀಮಾ ನಾಯ್ಕ್ ಮತ್ತು ಕೂಡ್ಲಿಗಿ ಶಾಸಕ ಎನ್. ಟಿ ಶ್ರೀನಿವಾಸ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನನ್ನ ಅವಧಿಯಲ್ಲಿ ಕೊಟ್ಟೂರು ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗೆ ಸುಮಾರು ನಾಲ್ಕು ಕೋಟಿ ವೆಚ್ಚದ ಹಣ ನೀಡಿದ್ದೇನೆ ಎಂದು ತಿಳಿಸಿದರು.
ಎಪಿಎಂಸಿಯ ನೂತನ ಅಧ್ಯಕ್ಷರಾದ ಎ ನಂಜಪ್ಪ ಸಿಸಿ ರಸ್ತೆ, ವಿದ್ಯುತ್ ದೀಪಗಳು, 100 ಮೆಟ್ರಿನ್ ಟನ್ ಸಂಗ್ರಹಣೆಯದ ಕೊಠಡಿ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳ ಬಗ್ಗೆ ಬಿತ್ತರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾರುಕೀಶ, ಸಾವಜ್ಜಿ ರಾಜೇಂದ್ರ ಪ್ರಸಾದ್, ಎಪಿಎಂಸಿ ಕಾರ್ಯದರ್ಶಿ ವೀರಣ್ಣ, ಪರುಶುರಾಮ, ಭರ್ಮಪ್ಪ, ಮೂಗಪ್ಪ, ಗೂಳಿ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಅಡಿಕೆ ಮಂಜುನಾಥ್, ಪಟ್ಟಣ ಪಂಚಾಯತಿ ಅಧ್ಯಕ್ಷೆ ರೇಖಾ ರಮೇಶ್, ಬದ್ದಿ ಮರಿಸ್ವಾಮಿ, ಎಪಿಎಂಸಿಯ ಉಪಾಧ್ಯಕ್ಷ ಶಿವಣ್ಣ, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ.ವಿನಾಯಕ ಕೊಟ್ಟೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030