ಕಿರಿಯರಿಗೆ ಸಂಸ್ಕಾರ ಕಲಿಸುವಂತಹ ಶಕ್ತಿ ಹಿರಿಯರಲ್ಲಿದೆ: ನ್ಯಾ. ಮಹಾಂತೇಶ್ ಎಸ್ ದರಗದ…!!!

Listen to this article

ಹಿರಿಯ ನಾಗರಿಕರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು
ಕಿರಿಯರಿಗೆ ಸಂಸ್ಕಾರ ಕಲಿಸುವಂತಹ ಶಕ್ತಿ ಹಿರಿಯರಲ್ಲಿದೆ: ನ್ಯಾ. ಮಹಾಂತೇಶ್ ಎಸ್ ದರಗದ

ಕೊಪ್ಪಳ : ಕಿರಿಯರಿಗೆ ಸಂಸ್ಕಾರ ಕಲಿಸುವಂತಹ ಶಕ್ತಿ ಹಿರಿಯರಲ್ಲಿದೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್ ದರಗದ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 09ರಂದು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 2024-25ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ದೇಶದ ಅಭ್ಯುದಯ ಆಗಬೇಕಾದರೆ, ಹಳೆಯ ಬೇರು ಮತ್ತು ಹೊಸ ಬೇರು ಸೇರಿ ಒಂದು ಸೊಬಗು ಆಗಬೇಕು. ಈ ದಿಶೆಯಲ್ಲಿ ಕಿರಿಯರಾದವರು ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು. ಇಂದಿನ ದಿನಮಾನಗಳಲ್ಲಿ ತಂದೆ-ತಾಯಿ, ಹಿರಿಯರನ್ನ ಹಿಯಾಳಿಸುವಂತಹ ಪರಿಸ್ಥಿತಿ ಹುಟ್ಟಿಕೊಂಡಿದೆ. ಮನೆಯಲ್ಲಿ ಯಾರೂ ಹಿರಿಯರು ಇರಲೇಬಾರದು ಎಂಬಂತೆ ಕೆಲವರ ಮನೋಭಾವನೆ ಬೆಳೆಯುತ್ತಿದೆ. ವಿದ್ಯೆಯಿದ್ದರೂ ಇಂದಿನ ಮಕ್ಕಳಲ್ಲಿ ವಿನಯತೆ ಹೆಚ್ಚಾಗಿ ಕಾಣುತ್ತಿಲ್ಲ. ವಿದ್ಯೆಯ ಜೊತೆಜೊತೆಗೆ ವಿನಯತೆ ಅತ್ಯವಶ್ಯಕವಾಗಿದ್ದು, ಹಿರಿಯರಿಂದ ಆ ವಿನಯ ಭಾವಗಳನ್ನು ಕಲಿಯಲು ಸಾಧ್ಯವಿದೆ. ಹಿರಿಯ ನಾಗರಿಕರು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತ್ಯವಶ್ಯಕವಾಗಿದ್ದು, ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ವೆಂಕಟೇಶ ದೇಶಪಾಂಡೆ ಅವರು ಮಾತನಾಡಿ, ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ನಿಮಿತ್ಯ ಜಿಲ್ಲೆಯ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರೀಡಾ ಸ್ಪರ್ಧೆಗಳಲ್ಲಿ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು, ಮ್ಯೂಸಿಕಲ್ ಚೆರ್ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಏಕ ಪಾತ್ರಾಭಿನಯ, ಗಾಯನ ಸ್ಪರ್ಧೆಗಳನ್ನು ಹಿರಿಯ ನಾಗರಿಕರಿಗಾಗಿ ಆಯೋಜಿಸಿದೆ. ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತಿಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಹಿರಿಯ ನಾಗರಿಕರಿಗೆ ಹಲವಾರು ಯೋಜನೆಗಳಿದ್ದು, ಅವುಗಳನ್ನು ತಲುಪಿಸಲು ಶ್ರಮಿಸಲಾಗುವುದು ಎಂದರು.


ಕಾರ್ಯಕ್ರಮದಲ್ಲಿ ನಿವೃತ್ತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬೀರನಾಯಕರ್, ಉಪಾಧ್ಯಕ್ಷರಾದ ಇಂದುಮತಿ, ಗಣ್ಯರಾದ ಅಶೋಕ ಪಾಟೀಲ, ಬಸವರಾಜ ಸಜ್ಜನ, ಸುಮಂಗಲ ಹಂಚಿನಾಳ, ನಾಗಪ್ಪ ಬಳಗೇರಿ, ಜೆ.ಶರಣಪ್ಪ ಸೇರಿದಂತೆ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಹಿರಿಯ ನಾಗರಿಕರ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend