ಕಲ್ಲು ಗಣಿಗಾರಿಕೆ ಗುತ್ತಿಗೆದಾರರಿಗೆ ಅರಿವು ಅತ್ಯವಶ್ಯಕ: ಡಿಸಿ ನಲಿನ್ ಅತುಲ್…!!!

ಕಲ್ಲು ಗಣಿಗಾರಿಕೆ ಗುತ್ತಿಗೆದಾರರಿಗೆ ಅರಿವು ಅತ್ಯವಶ್ಯಕ: ಡಿಸಿ ನಲಿನ್ ಅತುಲ್

ಕೊಪ್ಪಳ : ಕಲ್ಲು ಗಣಿಗಾರಿಕೆ ಗುತ್ತಿಗೆದಾರರಿಗೆ ಅರಿವು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನೆಡೆದ ಕಲ್ಲುಗಣಿ ಗುತ್ತಿಗೆದಾರರಿಗೆ ಕಲ್ಲುಗಣಿ ಪ್ರದೇಶದಲ್ಲಿ ಸುರಕ್ಷಿತವಾಗಿ ಬ್ಲಾಷ್ಟಿಂಗ್ ಮಾಡುವ ಕುರಿತಾದ ಅರಿವು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಕಲ್ಲು ಗಣಿಗಾರಿಕೆ ಉದ್ಯಮವನ್ನು ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಕಲ್ಲು ಗಣಿಗಾರಿಕೆ ಗುತ್ತಿಗೆದಾರರು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಿಯಮಾನುಸಾರ ಗಣಿಗಾರಿಕೆ ಮಾಡಲು ಅನುಸರಿಸಬೇಕಾದ ಮಾನದಂಡಗಳ ಕುರಿತು ತಿಳಿದುಕೊಳ್ಳಬೇಕು. ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಕಾರ್ಯನಿರ್ವಹಿಸಿಸುತ್ತಿರುವ ಕಾರ್ಮಿಕರ ಸುರಕ್ಷತೆದೊಂದಿಗೆ ಬ್ಲಾಷ್ಟಿಂಗ್ ಕೈಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸುರಕ್ಷತ ಬ್ಲಾಷ್ಟಿಂಗ್ ಕೈಗೊಳ್ಳಲು ಹಮ್ಮಿಕೊಂಡಿರುವ ಅರಿವು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಬಳ್ಳಾರಿಯ ಗಣಿ ಸುರಕ್ಷತಾ ನಿರ್ದೇಶಕರು ಗಣಿಗಳಲ್ಲಿ ಸ್ಫೋಟಕಗಳ ಸುರಕ್ಷಿತ ನಿರ್ವಹಣೆಗಳು ಮತ್ತುಸುರಕ್ಷತ ಬ್ಲಾಷ್ಟಿಂಗ್ ಕೈಗೊಳ್ಳುವ ಅನುಸರಿಸುವ ಕ್ರಮಗಳ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಿಯಾಜ್ ಸೇರಿದಂತೆ ಭೂವಿಜ್ಞಾನಿಗಳು ಹಾಗೂ ಕೊಪ್ಪಳ ಜಿಲ್ಲೆಯ ಕಲ್ಲುಗಣಿ ಗುತ್ತಿಗೆದಾರರು ಉಪಸ್ಥಿತಿರಿದ್ದರು…

Leave a Reply

Your email address will not be published. Required fields are marked *