ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗುಂದಿ ಗ್ರಾಮದಲ್ಲಿ ಚಾಲನೆ…!!!

Listen to this article

ಗಂಗಾವತಿ: ಇಂದು 08/10/2024 ರಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷರಾದ ಶ್ರೀ ರಾಜ ನಾಯಕ ಅವರು. ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗುಂದಿ ಗ್ರಾಮದಲ್ಲಿ ಚಾಲನೆ ನೀಡಿದರು..

ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ. ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯಿತಿ ಚುನಾವಣೆಗಾಗಿ. ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ 20,000 ಸದಸ್ಯರನ್ನು ಮಾಡುವ ಗುರಿಯನ್ನು ಹೊಂದಿದ್ದೇವೆ. ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಕೇಂದ್ರದ ಸಚಿವರಾಗಿರುವುದರಿಂದ.

ಇಡೀ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್. ಪರವಾದ. ವಾತಾವರಣ ನಿರ್ಮಾಣವಾಗುತ್ತಿದೆ. ಯುವಕರು ಜೆಡಿಎಸ್ ನತ್ತ ಬರುತ್ತಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು..

ಅಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು. ದಕ್ಷ . ಪ್ರಾಮಾಣಿಕ. ಹಾಗೂ ರೈತರ ಸಂಪೂರ್ಣ ಸಾಲಮನ್ನಾ ಮಾಡಿದ ಕೀರ್ತಿ. ಕುಮಾರಸ್ವಾಮಿಯವರಿಗೆ ಸಲ್ಲುತ್ತದೆ..

ಇಂದಿನ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ. ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಜನತೆ ಈ ಸರ್ಕಾರದಿಂದ . ಬ್ರಹ್ಮನಿರಸನ. ಗೊಂಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ. ಗಂಗಾವತಿ ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷರಾದ ಕೃಷ್ಣ ನಾಯಕ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಧ್ಯಕ್ಷರಾದ. ಖಾಜಾ ಪಾಶ. ಎಸ್ ಸಿ ಘಟಕದ ಅಧ್ಯಕ್ಷರಾದ ಕೃಷ್ಣ. ಸೇವಾದಳದ ಅಧ್ಯಕ್ಷರಾದ ಹುಸೇನ್.. ಬಲದೇವ ಟಾಕೂರ್. ರಘು ಮಹೇಶ್. ಚಂದ್ರು. ರಮೇಶ್ ನಾಯಕ. ಹನುಮೇಶ್. ಇನ್ನಿತರ ಯುವಕರಿದ್ದರು…

ವರದಿ. ಮಂಜುನಾಥ್, ಉಪ್ಪಾರ ಗಂಗಾವತಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend