ಬೆಳ್ಳಿಗಟ್ಟ : ದೇಶ ಕಂಡ ಮಹಾನ್ ವ್ಯಕ್ತಿ ಡಾಕ್ಟರ್ ಬಿಆರ್ ಅಂಬೇಡ್ಕರ್…!!!

ಬೆಳ್ಳಿಗಟ್ಟ : ದೇಶ ಕಂಡ ಮಹಾನ್ ವ್ಯಕ್ತಿ ಡಾಕ್ಟರ್ ಬಿಆರ್ ಅಂಬೇಡ್ಕರ್

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬೆಳ್ಳಿಗಟ್ಟ ಗ್ರಾಮದಲ್ಲಿ ದಿನಾಂಕ 14/04/2025 ರಂದು ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್. ಪ್ರತಿ ವರ್ಷ ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲು ಪ್ರತಿ ವರ್ಷದಂತೆ ಅಂಬೇಡ್ಕರ್ ಜಯಂತಿಯನ್ನು ಬೆಳ್ಳಿಗಟ್ಟ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿಯೂ134 ನೇ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಬೆಳ್ಳಿಗಟ್ಟಗ್ರಾಮ ದಲಿತ ಸಂಘದ ಅಧ್ಯಕ್ಷರಾದ ನಾಗರಾಜ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಕಜೆನ್ಸಿ ತಿಪ್ಪೇಸ್ವಾಮಿ , ದಲಿತ ಮುಖಂಡರಾದ ನಾಗೇಶಪ್ಪ ,ತಿಪ್ಪೇಸ್ವಾಮಿ ಸುಧಾಕರ, ಎಲೆಕಟ್ಟ ಬಸಪ್ಪ,ರುದ್ರಪ್ಪ, ಗಂಗಾಧರ, ಬಸವರಾಜ್, ಸಣ್ಣಬಸಪ್ಪ ,ಗ್ರಾಮ ಪಂಚಾಯತಿ ಸದಸ್ಯರಾದ ಮಹೇಶ್, ಲೋಕೇಶ್, ಹಾಗೂ ಊರಿನ ಮುಖಂಡರು ಕಾರ್ಯಕರ್ತರು ಇದ್ದರು…

ವರದಿ:- ಅನಿಲ್ ಕುಮಾರ್ ಹುಲಿಕುಂಟೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *