ಪ್ರವಾಸಿ, ಪಾರಂಪರಿಕ ತಾಣ, ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಚ್ಛತೆ
ಚಿತ್ರದುರ್ಗ:ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಅಂಗವಾಗಿ ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆಯ ಮುಂಭಾಗದ ರಸ್ತೆಯಿಂದ ಶ್ರೀ ಏಕನಾಥೇಶ್ವರಿ ದೇವಸ್ಥಾನದವರೆಗೆ ಮಂಗಳವಾರ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.
ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಅಂಗವಾಗಿ ಸ್ವಭಾವ-ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಹೆಚ್.ಶಶಿಕುಮಾರ್ ಅವರು ಪ್ರವಾಸಿ ತಾಣಗಳು, ಪ್ರಾರಂಪರಿಕ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಚ್ಛತೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರವಾಸಿಗರ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.
ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಎಂಬ ಅರಿವು ಮೂಡಿಸುವ ಕರಪತ್ರಗಳನ್ನು ಪ್ರವಾಸಿಗರಿಗೆ ವಿತರಿಸಿದರು. ನಂತರ ಚಿತ್ರದುರ್ಗ ಪ್ರವಾಸೋದ್ಯಮ ಕಚೇರಿಯಿಂದ ಶ್ರೀ ಉಚ್ಚಂಗಿಯಲ್ಲಮ್ಮ ದೇವಸ್ಥಾನದವರೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಘೋಷಣೆಯನ್ನು ಕೂಗುತ್ತಾ, ವಿಶೇಷವಾಗಿ ಆಸ್ಟೆçÃಲಿಯಾದಿಂದ ಚಿತ್ರದುರ್ಗ ಕೋಟೆಯನ್ನು ವೀಕ್ಷಿಸಲು ಬಂದಿದ್ದ ವಿದೇಶಿ ಪ್ರವಾಸಿಗರು, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ, ಪ್ರವಾಸಿ ಮಿತ್ರರು, ಪ್ರವಾಸಿ ಮಾರ್ಗದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸಿಬ್ಬಂದಿಗಳು ಹಾಗೂ ಸಾರ್ವಜನಿಕರೊಂದಿಗೆ ಜಾಥಾ ನಡೆಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಐತಿಹಾಸಿಕ ಚಿತ್ರದುರ್ಗ ಕೋಟೆಯಿಂದ ಶ್ರೀ ಏಕನಾಥೇಶ್ವರಿ ಪಾದದ ಗುಡಿಯವರೆಗೆ ರಸ್ತೆಯ ಎಡ ಮತ್ತು ಬಲಭಾಗದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳು ಹೆಕ್ಕಿ ನಗರಸಭೆಯ ಕಸದ ವಾಹನಕ್ಕೆ ಹಾಕಲಾಯಿತು. ಹಾಗೆಯೇ ಕಸಗೂಡಿಸುವ ಮೂಲಕ ಪ್ರವಾಸೋದ್ಯ ಇಲಾಖೆ ಸಿಬ್ಬಂದಿಗಳು, ಪ್ರವಾಸಿ ಮಿತ್ರರು, ಪ್ರವಾಸಿ ಮಾರ್ಗದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಿಬ್ಬಂದಿಗಳ ಸಹಯೋಗದೊಂದಿಗೆ ಸ್ವಚ್ಛತೆಗೊಳಿಸಲಾಯಿತು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030