ಪಿಳ್ಳೇಕೆರೆನಹಳ್ಳಿ ಬಿ ಅಂಗನವಾಡಿ ಕೇಂದ್ರ ಉದ್ಘಾಟನೆ
ತಾಲ್ಲೂಕುಮಟ್ಟದ ಪೋಷಣ್ ಅಭಿಯಾನಕ್ಕೆ ಚಾಲನೆ
ಚಿತ್ರದುರ್ಗ ತಾಲ್ಲೂಕಿನ ಪಿಳ್ಳೇಕೆರೆನಹಳ್ಳಿಯಲ್ಲಿ ಬಿ ಅಂಗನವಾಡಿ ಕೇಂದ್ರದ ಉದ್ಘಾಟನೆ ಹಾಗೂ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಗುರುವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತಾಯಿಗೊಂದು ಗಿಡ ನೆಡುವ ಶೀರ್ಷಿಕೆಯಡಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಗಿಡ ನೆಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಪೋಷಣ್ ಮಾಸಾಚರಣೆ ಉತ್ತಮ ಕಾರ್ಯಕ್ರಮವಾಗಿದ್ದು, ಉತ್ತಮ ಉದ್ದೇಶ ಹೊಂದಿದೆ. ಕಾರ್ಯಕರ್ತೆಯರು ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಗ್ರಾಮದ ಮಕ್ಕಳಿಗೆ ಹಾಗೂ ತಾಯಂದಿರಿಗೆ ನೇರವಾಗಿ ಸೇವೆಗಳನ್ನು ತಲುಪಿಸಲು ಉತ್ತಮವಾಗಿ ಕಾರ್ಯನಿರ್ವಹಿಸಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ , ಸುಕನ್ಯಾ ಸಮೃದ್ಧಿ ಪಾಸ್ ಬುಕ್‌ಗಳನ್ನು ವಿತರಿಸಿದರು. ಜೊತೆಗೆ ಅನ್ನ ಪ್ರಾಶನ ಕಾರ್ಯಕ್ರಮ ನಡೆಸಿಕೊಟ್ಟರು. ಬಾಲ ವಿವಾಹ ನಿಷೇಧ ಕಾಯ್ದೆ ಕುರಿತು ಪೋಸ್ಟರ್‌ಗಳನ್ನು ಪ್ರದರ್ಶಿಸುವುದರ ಮೂಲಕ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ವನಜಾಕ್ಷಮ್ಮ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜ್ಯೋತಿ ದೇವೇಂದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ದಿವಾಕರ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಪಿ.ಎಸ್ ಸಿದ್ದೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್, ತಾಲೂಕು ಕೆಡಿಪಿ ಸದಸ್ಯ ನಾಗರಾಜ್, ತಹಶೀಲ್ದಾರ್ ನಾಗವೇಣಿ, ಜಿಲ್ಲಾ ನಿರೂಪಣಾಧಿಕಾರಿ ವಿಜಯಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಮಂಜುಳ ಮತ್ತು ದಾಸಪ್ಪ ಹಾಗೂ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030