ಕೌಶಲ್ಯ ತರಬೇತಿ ಕೇಂದ್ರಗಳಿಗೆ ಭೇಟಿ, ಪರಿಶೀಲನೆ
ಚಿತ್ರದುರ್ಗ:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ ಅವರು ಮಂಗಳವಾರ ಚಿತ್ರದುರ್ಗ ನಗರದ ವಿವಿಧ ಕೌಶಲ್ಯ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ ಅವರು ನೇರವಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಇಂಡಸ್ಟ್ರೀ ಲಿಂಕೇಜ್ ಸೇಲ್ (ಐಎಲ್‍ಸಿ) ಮತ್ತು ಸ್ಥಳ ನಿಯುಕ್ತಿಗಾಗಿ ಲೆಟರ್ ಆಫ್ ಇಂಡೆಂಟ್‍ನಲ್ಲಿ ನೊಂದಣಿ ಆಗಿರುವ ತರಬೇತಿ ಸಂಸ್ಥೆಗಳ ಮಾಹಿತಿ ಹಾಗೂ ನೊಂದಣಿ ಆಗಿರುವ ಖಾಸಗಿ ತರಬೇತಿ ಸಂಸ್ಥೆಗಳ ಮಾಹಿತಿ ಪಡೆದುಕೊಂಡರು.
2022-23ನೇ ಸಾಲಿನಲ್ಲಿ ಹೊಲಿಗೆ ಯಂತ್ರದಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ವಿತರಿಸಲು ಸಂಕಲ್ಪ ಯೋಜನೆಯಡಿಯಲ್ಲಿ ವಿತರಿಸಿರುವ ಹೊಲಿಗೆ ಯಂತ್ರಗಳನ್ನು ಪರಿಶೀಲಿಸಿದರು. ನಂತರ ಸೇವಾ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ ಸೊಸೈಟಿಯ ತರಬೇತಿ ಸಂಸ್ಥೆ ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖಾಮುಖಿಯಾಗಿ ಸಂದರ್ಶಿಸಿದರು.
ನಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ವ್ಯಾಪ್ತಿಗೆ ಒಳಪಡುವ ಕಾತ್ರಾಳ್ ವಿದ್ಯಾಪೀಠಕ್ಕೆ ಭೇಟಿ ಮಾಡಿ, ವಿದ್ಯಾಪೀಠದ ಸುರಕ್ಷತೆಗಾಗಿ ಜಿಲ್ಲಾ ನಿರ್ಮಿತಿ ಕೇಂದ್ರದವರು ನಿರ್ಮಿಸುತ್ತಿರುವ ಕಾಂಪೌಂಡ್ ಕಾಮಗಾರಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಟಿ.ವೇಮಣ್ಣ, ಸಹಾಯಕ ನಿರ್ದೇಶಕ ಡಿ.ಉಮೇಶ್, ನಿರ್ಮಿತಿ ಕೇಂದ್ರದ ಸಹಾಯಕ ಇಂಜಿನಿಯರ್ ಮಧುಸೂಧನ್ ಸೇರಿದಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿ ಇದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030