ವಿವಿಧ ಇಲಾಖೆ ಕಾಮಗಾರಿಗಳ ಪ್ರಗತಿ ಪರಿಶೀಲನೆ
ನಿಗಧಿತ ಕಾಲಾವಧಿಯೊಳಗೆ ಪ್ರಗತಿ ಸಾಧಿಸಿ
-ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್
ಚಿತ್ರದುರ್ಗ:ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಚ್ಛ ಭಾರತ್ ಮಿಷನ್ (ಗ್ರಾ) & ಜಲ ಜೀವನ್ ಮಿಷನ್ ಯೋಜನೆಗಳು ಹಾಗೂ ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಿಗಧಿತ ಕಾಲಾವಧಿಯೊಳಗೆ ಪ್ರಗತಿ ಸಾಧಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಮುಖ್ಯ ಯೋಜನಾ ಅಧಿಕಾರಿ ಸಿ.ಎನ್.ಗಾಯಿತ್ರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಮುಖ್ಯ ಲೆಕ್ಕಾಧಿಕಾರಿ ಮಧು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಮಂಜುನಾಥ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕ ಬಿ.ಸಿ.ನಾಗರಾಜ್, ವಿನಯ್, ಪ್ರಮೀಳಾ, ಶಶಿಧರ್, ಜಿ.ಪಂ ಡಿ.ಪಿ.ಎಂ ಶಶಿಧರ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030