ಠಾಣೆಯಲ್ಲೇ ರಾಸಲೀಲೆ ಕೇಸ್‌: ಅಮಾನತು ಬೆನ್ನಲ್ಲೇ DySP ರಾಮಚಂದ್ರಪ್ಪಗೆ ಬಿಗ್‌ ಶಾಕ್‌…!!!

Listen to this article

ಠಾಣೆಯಲ್ಲೇ ರಾಸಲೀಲೆ ಕೇಸ್‌: ಅಮಾನತು ಬೆನ್ನಲ್ಲೇ DySP ರಾಮಚಂದ್ರಪ್ಪಗೆ ಬಿಗ್‌ ಶಾಕ್‌

ತುಮಕೂರು: ಪೊಲೀಸ್‌ ಠಾಣೆಯಲ್ಲೇ ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ರಾಸಲೀಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಇನ್ನೇನು 2026ರಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪಗೆ ಇದೆಲ್ಲಾ ಬೇಕಿತ್ತಾ ಎನ್ನುವಂತಾಗಿದೆ.

ಅಷ್ಟಕ್ಕೂ ಆಗಿದ್ದೇನು? ಪ್ರಕರಣದ ವಿವರವೇನು? ಇಲ್ಲಿದೆ ಓದಿ.

ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ರಾಮಚಂದ್ರಪ್ಪ ಹಾಗೂ ಮಹಿಳೆಯೊಬ್ಬರ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸ್‌ ಠಾಣೆಯಲ್ಲೇ ಮಹಿಳೆಯನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ ಎನ್ನುವ ಆರೋಪದ ಮೇಲೆ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದೀಗ ಅಮಾನತಿನ ಬೆನ್ನಲ್ಲೇ ರಾಮಚಂದ್ರಪ್ಪನನ್ನು ಬಂಧಿಸಿರುವ ವಿಚಾರ ಬಹಿರಂಗವಾಗಿದೆ.

ಮಹಿಳೆ ಪೊಲೀಸ್‌ ಠಾಣೆಗೆ ಬಂದಿದ್ದೇಕೆ?

ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ಪಾವಗಡದಿಂದ ಜಮೀನಿನ ಕುರಿತಾಗಿ ವ್ಯಾಜ್ಯ ಬಗೆಹರಿಸುವಂತೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್‌ಪಿ ರಾಮಚಂದ್ರಪ್ಪನ ಪರಿಚಯವಾಗಿದ್ದು, ಬಳಿಕ ಆಕೆ ನ್ಯಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಮಹಿಳೆಯ ಅಸಹಾಯಕತೆಯನ್ನು ಬಳಸಿಕೊಂಡ ರಾಮಚಂದ್ರಪ್ಪ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಜೊತೆಗೆ ತಮ್ಮ ಮಾತುಗಳಿಂದಲೇ ಪುಸಲಾಯಿಸಿ ಚೆನ್ನಾಗಿ ಸ್ನೇಹ ಬೆಳಸಿಕೊಂಡಿದ್ದಾನೆ ಎನ್ನಲಾಗಿದೆ.

ಅಲ್ಲದೇ ನಾವು ಕರೆದಾಗ ವಿಚಾರಣೆಗೆ ಪೊಲೀಸ್ ಠಾಣೆಗೆ ಬರಬೇಕು ಎಂದು ತಾಕೀತು ಕೂಡ ಮಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ಕೆಲವು ಮಾಹಿತಿ ಬೇಕು ಎಂದು ಮಹಿಳೆಯನ್ನು ಠಾಣೆಗೆ ಕರೆಸಿಕೊಂಡಿದ್ದಾನೆ. ಬಳಿಕ ಮಹಿಳೆಯನ್ನು ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಯಾರೋ ಅಪರಿಚಿತ ವ್ಯಕ್ತಿ ಇದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಈ ವಿಡಿಯೋ ಶೇರ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ಎಲ್ಲೆಡೆ ವೈರಲ್‌ ಆಗಿತ್ತು. ವಿಡಿಯೋ ಮಾಡಿದವರು ಯಾರು? ಎಲ್ಲೆಡೆ ಹಂಚಿದವರು ಯಾರು? ಎನ್ನುವ ಮಾಹಿತಿ ಈವರೆಗೂ ಬಹಿರಂಗಗೊಂಡಿಲ್ಲ.

ಇನ್ನು ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ವೈರಲ್‌ ಆಗುತ್ತಿದ್ದಂತೆ ಮೊದಲು ಅಮಾನತು ಮಾಡಲಾಗಿತ್ತು. ಬಳಿಕ ನ್ಯಾಯ ಕೇಳಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ….

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend