ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ
ಹಿಂಗಾರು ಹಂಗಾಮಿನ ವಿಮಾ ಬೆಳೆಗಳ ಕಟಾವು ಪ್ರಯೋಗಗಳ ಯೋಜನಾ ಪಟ್ಟಿ ಬಿಡುಗಡೆ.
ಧಾರವಾಡ : 25: 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ ನಲ್ಲಿ ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಬೆಳಿಗ್ಗೆ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.
ವಿಮೆಗೆ ಒಳಪಟ್ಟ ಬೆಳೆಗಳ ಕಟಾವು ಪ್ರಯೋಗ ಕಾರ್ಯನಿರ್ವಹಿಸಲು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತ್ತು ಈ ಕಾರ್ಯದ ಮೇಲ್ವಿಚಾರಣೆಗಾಗಿ ಸಾಂಖ್ಯಿಕ, ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳನ್ನು ನೇಮಿಸಿದ್ದು, ಅವರು ಸಿಸಿಇ ನಿಯಮಾವಳಿಗಳ ಅನುಸಾರವಾಗಿ ನಿಗದಿತ ಕಾಲಾವಧಿಯಲ್ಲಿ ವಿಮೆ ಬೆಳೆಗಳ (ಬೆಳೆ ಅಂದಾಜು ಸಮೀಕ್ಷೆ-ಸಿಸಿಇ) ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030