ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ…!!!

Listen to this article

ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಜಿಲ್ಲಾಡಳಿತದಿಂದ ಆ.20 ರಂದು ಡಿ.ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರ್

ಬಳ್ಳಾರಿ:ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಗುರುವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಅದೇರೀತಿಯಾಗಿ ಜಿಲ್ಲೆಯಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಗಳಿಸಿದ ಹಿಂದುಳಿದ ವರ್ಗಗಳ ರೈತರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ತಿಳಿಸಿದ ಅವರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಡಾ.ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ಆಯೋಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend