ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಅದ್ದೂರಿ ಆಚರಣೆಗೆ ನಿರ್ಧಾರ…!!”

Listen to this article

ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್
ಅದ್ದೂರಿ ಆಚರಣೆಗೆ ನಿರ್ಧಾರ
ಬಳ್ಳಾರಿ:ಜಿಲ್ಲಾಡಳಿತದ ವತಿಯಿಂದ ನವೆಂಬರ್ 18 ರಂದು ಭಕ್ತ ಕನಕದಾಸ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ.18 ರಂದು ಬೆಳಗ್ಗೆ 09.30 ಗಂಟೆಗೆ ನಗರದ ಕುಮಾರಸ್ವಾಮಿ ದೇವಸ್ಥಾನ ಹತ್ತಿರದ ದಾಸಶ್ರೇಷ್ಠ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಕನಕದಾಸರ ಭಾವಚಿತ್ರದೊಂದಿಗೆ ಎಸ್‌ಪಿ ವೃತ್ತದಿಂದ ದುರ್ಗಮ್ಮ ಗುಡಿಯ ಮೂಲಕ ರಾಯಲ್ ವೃತ್ತದಿಂದ ಬೆಂಗಳೂರು ರಸ್ತೆ- ಬ್ರೂಸ್ ಪೇಟೆ ಪೊಲೀಸ್ ಠಾಣೆ- ಜೈನ್ ಮಾರ್ಕೆಟ್- ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ವೇದಿಕೆಯವರೆಗೆ ಮೆರವಣಿಗೆ ಜರುಗುತ್ತದೆ ಹಾಗೂ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಬಳಿಕ ಅಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ವೇದಿಕೆ ಕಾರ್ಯಕ್ರಮ ನಡೆಲಿದ್ದು, ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು ಮತ್ತು ಸಾರ್ವಜನಿಕರು ಸ್ವ-ಇಚ್ಛೆಯಿಂದ ಭಾಗವಹಿಸುವಂತೆ ಸೂಚನೆ ನೀಡಿದರು.
ದಾಸ ಶ್ರೇಷ್ಠ ಕನಕದಾಸರು ಸಮಾಜದ ಒಳಿತಿಗಾಗಿ ಶ್ರಮಿಸಿದವರಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾತ್ಮರ ಆಚರಣೆಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರು, ಜನಪ್ರತಿನಿಧಿ ಮತ್ತು ಸಂಘ-ಸAಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಶ್ರೇಷ್ಠ ಕನಕದಾಸರ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಬೇಕು. ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಡಿ ಸಾಧನೆಗೈದ ಮಹನೀಯರ ಹೆಸರು ನೀಡಿದರೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಮುಖಂಡರ ಬಳಿ ಚರ್ಚಿಸಿದರು.
ಸರ್ಕಾರದ ಸುತ್ತೋಲೆ ಅನ್ವಯ ಭಕ್ತ ಕನಕದಾಸರ ಜಯಂತಿಯನ್ನು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿಗಳು, ಶಾಲಾ-ಕಾಲೇಜು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ನಿರ್ದೇಶನ ನೀಡಿದರು.
ವೇದಿಕೆ ಅಲಂಕಾರ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಲಘು-ಉಪಹಾರ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಭಕ್ತ ಕನಕದಾಸರ ವಿಚಾರಧಾರೆಗಳನ್ನು ಶಾಲಾ-ಕಾಲೇಜು ಮಕ್ಕಳಿಗೆ ತಿಳಿಸಲು ಕಿರುಹೊತ್ತಿಗೆ ಮುದ್ರಿಸಿ ಹಂಚಬೇಕು ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend