ಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನಜಾಗೃತಿ ಜಾಥ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ
ಬಳ್ಳಾರಿ,:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಹಯೋಗದಲ್ಲಿ ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನಜಾಗೃತಿ ಜಾಥ ಹಾಗೂ ಬೀದಿ ನಾಟಕದ ಜಾಗೃತಿ ಕಾರ್ಯಕ್ರಮ ಹಾಗೂ ಅಂತರಾಷ್ಟಿಯ ದತ್ತು ಮಾಸಾಚರಣೆ ನವೆಂಬರ್-2024ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಮತ್ತು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಅಪರ ಜಿಲ್ಲಾಧಿಕಾರಿ ಅವರು ವೇಳೆ ಅಂತರಾಷ್ಟಿಯ ದತ್ತು ಮಾಸಾಚರಣೆ ನವೆಂಬರ್-2024ರ ಅಂಗವಾಗಿ ಕಾನೂನು ಬದ್ಧ ದತ್ತು ಕುರಿತ ಸಂಕಲ್ಪ ಸಂದೇಶದ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ಅಳಿಸಿ-ಮಕ್ಕಳನ್ನು ಶಾಲೆಗೆ ಕಳುಹಿಸಿ. ಬನ್ನಿ, ಬಾಲ ಕಾರ್ಮಿಕರನ್ನು ದುಡಿತದಿಂದ ಬಿಡಿಸೋಣ. ಬನ್ನಿ ಮಕ್ಕಳ ಬಾಲ್ಯವನ್ನು ರಕ್ಷಿಸಿ, ಬೆಳೆಸಲು ಸದ್ಧರಾಗೋಣ ಎನ್ನುವ ಫಲಕವುಳ್ಳ ಬ್ಯಾನರ್ ಮೂಲಕ ಜನ ಜಾಗೃತಿ ಸಂಚಾರಿ ವಾಹನ ಕಾರ್ಯಕ್ರಮ-2024ಗೆ ವಿದ್ಯುಕ್ತ ಚಾಲನೆ ನೀಡಿದರು.
ಜಾನಪದ ಕಲಾ ತಂಡವು ಜಾಗೃತಿ ಗೀತೆಗಳ ಮೂಲಕ ಬಾಲ ಕಾರ್ಮಿಕ ಪದ್ಧತಿ ಮತ್ತು ಕಿಶೋರ ಕಾರ್ಮಿಕ ಪದ್ಧತಿಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದು ಜಾಥಾದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಕಾರ್ಮಿಕ ನಿರೀಕ್ಷಕರಾದ ರಮೇಶ್, ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030