ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿಯರ ಸಮೀಕ್ಷೆ ಕಾರ್ಯ ನಡೆಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ:ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿಯರ ಮಹಿಳೆಯರ ಅಹಾಯಕತೆಯನ್ನು ಹೋಗಲಾಡಿಸಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ಅವರಿಗೆ ಒದಗಿಸಲು ಅವರ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಕೋಶ ರಚಿಸಿ:
ದಮನಿತ ಮಹಿಳೆಯರ ಅಸಹಾಯಕತೆಯನ್ನು ಹೋಗಲಾಡಿಸುವುದು ಹಾಗೂ ಅವರ ಜೀವನದ ಮಟ್ಟ ಸುಧಾರಣೆ ತರುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಲಹಾ ಕೋಶವನ್ನು ರಚಿಸಬೇಕು. ಇದರ ಮುಖಾಂತರ ಜಿಲ್ಲೆಯಲ್ಲಿರುವ ತೃತೀಯ ಲಿಂಗಿಗಳನ್ನು ಗುರುತಿಸಿ, ಗುರುತಿನ ಚೀಟಿ ನೀಡುವುದು, ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಮನ್ವಯತೆ ಮುಖ್ಯ:
ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿ ಮಹಿಳೆಯರ ಜೀವನಮಟ್ಟ ಸುಧಾರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜೊತೆಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ಶೋಷಣೆಯಿಂದ ಒಳಗಾದಲ್ಲಿ ಮತ್ತು ಯಾವುದೇ ಸೌಲಭ್ಯಗಳಿಂದ ವಂಚಿತರಾಗದAತೆ ನೋಡಿಕೊಳ್ಳುವುದು ಎಲ್ಲ ಇಲಾಖೆಗಳ ಕರ್ತವ್ಯವಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 1070 ಲಿಂಗತ್ವ ಅಲ್ಪಸಂಖ್ಯಾತರಿದ್ದು, ಚೇತನಾ ಯೋಜನೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಸಮಾಜದ ತುಳಿತಕ್ಕೆ ಹಾಗೂ ಶೋಷಣೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವರ ಜೀವನೋಪಾಯಕ್ಕಾಗಿ ಆದಾಯೋತ್ಪನ್ನಕರ ಚಟುವಟಿಕೆ ನಡೆಸಲು ಸರ್ಕಾರದಿಂದ ರೂ.30 ಸಾವಿರ ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ತಾಲ್ಲೂಕುವಾರು ಲಿಂಗತ್ವ ಅಲ್ಪಸಂಖ್ಯಾತರು:
ಬಳ್ಳಾರಿ ಗ್ರಾಮೀಣ: 58
ಬಳ್ಳಾರಿ ನಗರ: 449
ಕುರುಗೋಡು: 145
ಕಂಪ್ಲಿ: 134
ಸಿರುಗುಪ್ಪ: 167
ಸಂಡೂರು: 117
ಜಿಲ್ಲೆಯಲ್ಲಿ 2007-08 ರ ಸಮೀಕ್ಷೆ ಪ್ರಕಾರ ಒಟ್ಟು 4288 ಮಾಜಿ ದೇವದಾಸಿ ಮಹಿಳೆಯರನ್ನು ಗುರುತಿಸಲಾಗಿದ್ದು, ಅದರಲ್ಲಿ ಒಟ್ಟು 4043 ಮಾಜಿ ದೇವದಾಸಿ ಮಹಿಳೆಯರು ಪ್ರತಿ ತಿಂಗಳು 2000 ರೂ. ನಂತೆ ಮಾಶಾಸನ ಪಡೆಯುತ್ತಿದ್ದಾರೆ. ಇನ್ನುಳಿದ 245 ಮಾಜಿ ದೇವದಾಸಿ ಮಹಿಳೆಯರು ಬಾಕಿ ಉಳಿದಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಬ್ಯಾಂಕ್‌ಗಳಲ್ಲಿ ಸಾಲ-ಸೌಲಭ್ಯ ನೀಡಬೇಕು. 2 ಲಕ್ಷದವರೆಗೆ ಯಾವುದೇ ಶೂರಿಟಿ(ಜಾಮೀನು) ಇಲ್ಲದೇ ಲೋನ್ ವಿತರಣೆಗೆ ಅವಕಾಶವಿದ್ದು, ಈ ಕುರಿತು ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಮತ್ತು ಮಾಜಿ ದೇವದಾಸಿ ಮಹಿಳೆಯರ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಲಾಲಪ್ಪ, ಸಿಡಿಪಿಒ ಅಧಿಕಾರಿಗಳು, ಸೌಖ್ಯ ಬೆಳಕು ಸೇವಾ ಸಂಸ್ಥೆ, ವಿಮುಕ್ತಿ ಸಂಸ್ಥೆ, ಸಂಗಮ ಸಂಸ್ಥೆ, ಪ್ರಗತಿ ಸೇವಾ ಸಂಸ್ಥೆ ಮತ್ತು ವೈಆರ್‌ಜಿಕೆ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030