ಬೀದರ್ ನಲ್ಲಿ ಜಾತ್ರೆಗೆ ಬಂದ ದಲಿತ ಸಮುದಾಯದ ಮೇಲೆ ಹಲ್ಲೆ, sc/st ದೌರ್ಜನ್ಯ ಕಾಯ್ದೆ ಯಲ್ಲಿ 73 ಜನ ಸವರ್ಣಿಯರ ಮೇಲೆ fri ದಾಖಲು.
ಬೀದರ್: ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ SC/ST ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ನವೆಂಬರ್ 2 ರಂದು ಚಳಕಾಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿತ್ತು. ಜಾತ್ರೆಯಲ್ಲಿ ದಲಿತರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರು ಅವರ ಮೇಲೆ ಹಲ್ಲೆ ಮಾಡಿದ್ದರುಎಂಬ ಆರೋಪ ಕೇಳಿ ಬಂದಿತ್ತು.
ಗ್ರಾಮದ ಹನುಮಾನ್ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ದಲಿತರ ಮನೆಗೆ ನುಗ್ಗಿ ಸವರ್ಣೀಯರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಪ್ರಕರಣ ದಾಖಲಿಸಿ ಕಟಕಚಿಂಚೋಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆ:
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ.ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ.
ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ…
ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030