ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ “ನಮ್ಮ ಶೌಚಾಲಯ ನಮ್ಮ ಗೌರವ” ಆಂದೋಲನ ಜಾಥಾ ಅಭಿಯಾನ ಕಾರ್ಯಕ್ರಮ ಇಂದು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯತಿ, ಕಗ್ಗಲೀಪುರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಟಿ ಸೋಮಶೇಖರ್ ಹಾಗೂ ಬೆಂಗಳೂರು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಾದ ಲತಾ ಕುಮಾರಿ, ಉಪಕಾರ್ಯದರ್ಶಿಗಳಾದ ಅನಿತಾ, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ. ಬಿಂದು ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ ಪಾಕ್ಷಿಕ ಮತ್ತು ಶೌಚಾಲಯದ ಬಗೆಗೆ ಮಕ್ಕಳಿಂದ ಪ್ರಬಂಧ ಸ್ಪರ್ದೆ ಮತ್ತು ಚಿತ್ರಕಲಾ ಸ್ಪರ್ಧೆ ಹಾಗು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸಲಾಯಿತು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030