ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಭಾರತ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಈ ಟೂರ್ನಿಯಲ್ಲಿ ಭಾರತದ ಅಜೇಯ ಓಟ ಮುಂದುವರೆದರೆ, ಪಾಕಿಸ್ತಾನದ ಸೋಲಿನ ಸರಣಿ ಮುಂದುವರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ 42.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.
ಇನ್ನೂ ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನವ್ನ ಬಗ್ಗುಬಡಿದ ಭಾರತದ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಪಂದ್ಯವನ್ನು ಮನೆಯಲ್ಲೇ ಕುಳಿತು ಟಿವಿಯಲ್ಲಿ ನೋಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾರತಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ರೋಚಕ ಜಯ ಗಳಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಸಂಘಟಿತ ಶ್ರೇಷ್ಠ ಪ್ರದರ್ಶನ ನೀಡಿದ ಎಲ್ಲಾ ಆಟಗಾರರು ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದು, ನಮ್ಮ ಹೆಮ್ಮೆಯ ಕ್ಷಣಗಳಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 49.4 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 241 ರನ್ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಬೆನ್ನು ಹತ್ತಿದ ಟೀಮ್ ಇಂಡಿಯಾ 42.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್ ಗಳಿಸುವ ಮೂಲಕ 6 ವಿಕೆಟ್ಗಳ ಮೂಲಕ ಜಯಭೇರಿ ಬಾರಿಸಿದೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030