ವಕೀಲೆ ಜೀವಾ ಆತ್ಮಹತ್ಯೆ ಕೇಸ್ : ‘SIT’ ಅಧಿಕಾರಿಗಳಿಂದ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್!!!

Listen to this article

ಬೆಂಗಳೂರು : ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಬಂಧನವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಡಿ ವೈ ಎಸ್ ಪಿ ಕನಕಲಕ್ಷ್ಮೀ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಇದೀಗ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರು ಅರೆಸ್ಟ್ ಆಗಿದ್ದಾರೆ.

ಪ್ರಕರಣ ಹಿನ್ನೆಲೆ?

ಜೀವಾ ಅವರು 2024 ನವೆಂಬರ್​​ 22ರಂದು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್​​ನಲ್ಲಿ ಡಿವೈಎಸ್​​ಪಿ ಕನಕಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಮೃತರ ಸಹೋದರಿ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಮತ್ತೊಂದೆಡೆ, ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರತ್ಯೇಕ ಎಸ್​​ಐಟಿ ರಚಿಸಿತ್ತು.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ಕರ್ನಾಟಕ ಹೋಮ್‌ ಗಾರ್ಡ್‌ನ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚೀಂದ್ರ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸೇರಿದಂತೆ ಮೂವರು ಅಧಿಕಾರಿಗಳ ವಿಶೇಷ ತಂಡ ತನಿಖೆ ನಡೆಸುತ್ತಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಇದೀಗ ಅವರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend