ಗೃಹಲಕ್ಷ್ಮಿ ಯೋಜನೆಯ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿ ಸಂಭ್ರಮಿಸಿದ ಅಕ್ಕತಾಯಿ…!!!

Listen to this article

ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ತನಗೆ ಬಂದ ಹಣದಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ. ಸಿದ್ದರಾಮಯ್ಯನವರು ಪ್ರತಿ ತಿಂಗಳು ಎರಡು ಸಾವಿರ ಹಣ ನೀಡ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ತಿಳಿಸಿದರು. ಇನ್ನು ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಅಜ್ಜಿ ಹರಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend