ಮುಗಳಕೋಡ ಪಟ್ಟಣದಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!!!

ಮುಗಳಕೋಡ ಪಟ್ಟಣದಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!
ಕಳೆದ ವರ್ಷ ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡದಲ್ಲಿ ದಲಿತರ ಗುಡಿಸಲುಗಳಿಗೆ ಸವರ್ಣಿಯರು(ಮೇಲ್ಜಾತಿ ) ಬೆಂಕಿ ಹಾಕಿರುವ ಘಟನೆ ನಡೆದಿದೆ.ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಗೋಮಾಳ ಜಾಗದಲ್ಲಿ ಮಹದೇವ್ ಮಾದರ್ ಎನ್ನುವವರು ಸುಮಾರು 12 ಗುಂಟೆ ಜಾಗದಲ್ಲಿ ಗುಡಿಸಿಲು ಹಾಕಿಕೊಂಡು ನೆಲೆಸಿದ್ದರು.ಈ ಜಾಗಕ್ಕಾಗಿ ಮಹಾವೀರ ಕುರಾಡೆ ಹಾಗೂ ಮಹಾದೇವ ಮಾದರ್ ಕುಟುಂಬಗಳ ನಡುವೆ ಜಗಳವಿತ್ತು.

ಮುಗಳಖೋಡ ಗ್ರಾಮದಲ್ಲಿನ ಈ ಒಂದು ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿದ್ದರು.
ಈ ಗುಡಿಸಲುಗಳಿಗೆ ಊರಿನ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬಹಳ ದಿನಗಳಿಂದಲೂ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಬೆಂಕಿ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *