ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ.
ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ದ್ವಿತೀಯ ದರ್ಜೆ ಗುಮಾಸ್ತನೋರ್ವ ಮಂಗಳವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಖಡೇಬಜಾರ ತಹಶಿಲ್ದಾರರ ಕಚೇರಿಯಲ್ಲಿ ನಡದಿದೆ.
ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ರದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ದರ್ಜೆ ಗುಮಾಸ್ತ ತಹಶಿಲ್ದಾರರ ಕಚೇರಿಯಲ್ಲಿಯೇ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬ್ಬಂದಿಗಳು ದೂರಿದ್ದಾರೆ.
ರುದ್ರಣ್ಣ ಅವರಿಗೆ ಬೆಳಗಾವಿ ತಹಶಿಲ್ದಾರರ ಕಚೇರಿಯಿಂದ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಡಳಿತ ಮಂಡಳಿಗೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದರು. ತನ್ನ ವರ್ಗಾವಣೆ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿಯೂ ರುದ್ರಣ್ಣ ಬರೆದುಕೊಂಡು ತಹಶಿಲ್ದಾರರ ಕಚೇರಿಯ ವಾಟ್ಸಪ್ ಗ್ರೂಪ್ ನಲ್ಲಿಯೂ ಚರ್ಚೆ ನಡೆಸಿ ಬಳಿಕ ಅದನ್ನು ಡಿಲಿಟ್ ಮಾಡಿದ್ದ ಎನ್ನುವ ಮಾಹಿತಿ ಇದ್ದು ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಖಡೇ ಬಜಾರ್ ಪೊಲೀಸರು ಹಾಗೂ ಡಿಸಿಪಿ ಜಗದೀಶ್ ರೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ವರದಿ. ಮಹಾಲಿಂಗ, ಎಚ್, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030