ಕೃಷ್ಣವೇಣಿ ಮನೆ ಚಿನ್ನದ ಗಣಿ: ಭ್ರಷ್ಟಾ ಅಧಿಕಾರಿ ಮನೆಯಲ್ಲಿ ರಾಶಿ ರಾಶಿ ಚಿನ್ನಾಭರಣ ಪತ್ತೆ!
ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದರು. ನಾಲ್ವರು ಭ್ರಷ್ಟಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಬೆಳ್ಳಗ್ಗೆ ಏಳು ಗಂಟೆಗಳಿಂದ್ಲೂ ಪರಿಶೀಲನೆ ನಡೆಸಿದ್ದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಮಂಗಳೂರಿನ 25ಕಡೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟಿಯಾಡಿದ್ದಾರೆ..
ಇನ್ನು ಯಲಹಂಕದಲ್ಲಿರೋ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆಯಲ್ಲೂ ಕೂಡ ಕ್ಯಾಶ್, ಚಿನ್ನಾಭರಣ, ಆಸ್ತಿ ಪತ್ರಗಳು ಸಿಕ್ಕಿವೆ.. ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿರೋ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.
ಮಂಗಳೂರಿನ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಅವರ ಬಳಿ 11.93 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ. ಅವರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ ನಡೆಸಲಾಯಿತು. 3 ನಿವೇಶನಗಳು, ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್ಸ್, ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ,
26 ಎಕರೆ ಕೃಷಿ ಜಮೀನು (ಕಾಫಿ ಪ್ಲಾಂಟೇಷನ್) ಆಸ್ತಿಯನ್ನು ಕೃಷ್ಣವೇಣಿ ಹೊಂದಿದ್ದಾರೆ. ಎಲ್ಲಾ ಸೇರಿ ಒಟ್ಟು ಮೌಲ್ಯ 10,41,38,286 ರೂ. ಇದೆ. 56,450 ನಗದು, 66,71,445 ರೂ. ಬೆಲೆ ಬಾಳುವ ಚಿನ್ನಾಭರಣಗಳು, 60,00,000 ರೂ. ಮೌಲ್ಯದ ವಾಹನಗಳು, 24,40,000 ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.. ಎಲ್ಲಾ ಸೇರಿ ಒಟ್ಟು ಮೌಲ್ಯ 1,51,67,895 ರೂ. ಇದೆ. ಸ್ಥಿರಾಸ್ತಿ ಹಾಗೂ ಚರಾಸ್ಥಿ ಸೇರಿ ಒಟ್ಟು 11,93,06,181 ರೂ. ಇದೆ…
ವರದಿ, ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030