ಭ್ರಷ್ಟ ಅಧಿಕಾರಿಗಳು ಕಣ್ಣು ಬಿಡುವಷ್ಟರಲ್ಲಿ , ರಾಜ್ಯದಲ್ಲಿ ಹಲವಾರು ವಿವಿಧೆಡೆ ಲೋಕಾಯುಕ್ತ ದಾಳಿ…!!!

Listen to this article

ಬೆಳ್ಳಂಬೆಳ್ಳಗೆ ಭ್ರಷ್ಟರ ಬೇಟೆ; ಬೆಂಗಳೂರು, ಬೆಳಗಾವಿ, ರಾಯಚೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ.

ಬೆಂಗಳೂರು: ಆದಾಯಕ್ಕಿಂತ ಜಾಸ್ತಿ ಆದಾಯ ಹೊಂದಿರುವ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳ್ಳಗೆ ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ ಸೇರಿದಂತೆ ಹಲವೆಡೆ ಭ್ರಷ್ಟರ ಬೇಟೆಯಾಡಿದ್ದಾರೆ. ಬಾಗಲಕೋಟೆಯ ಗ್ರಾಮ ಪಂಚಾಯತಿ ಪಿಡಿಒ, ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿಯ ಮನೆಗೂ ದಾಳಿ ನಡೆಸಿರುವ ಲೋಕಾಯುಕ್ತ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಎಲ್ಲೆಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ?

ಬೆಂಗಳೂರಿನ ಬಿಬಿಎಂಪಿ ಎಇಇ ಮಾಧವ ರಾವ್ ಎಂಬವರ ಮನೆಗೂ ದಾಳಿ ನಡೆಸಿರುವ ಲೋಕಾಯುಕ್ತ ದಾಖಲೆಗಳ ಪರಿಶೀಲನೆ.

ಬೆಳಗಾವಿ ನಗರದ ಅನಗೋಳದಲ್ಲಿರುವ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಅವರ ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ, ದಾಖಲೆಗಳ ಪರಿಶೀಲನೆ.

ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಅವರ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ.

ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್​ನಲ್ಲಿರುವ ಹೊಲಗೇರಿ ಗ್ರಾಮ ಪಂಚಾಯತ್ ಪಿಡಿಒ ಎಸ್​ಪಿ ಹಿರೇಮಠ ಮನೆಯಲ್ಲಿ ದಾಖಲೆಗಳ ಹುಡುಕಾಟ.

ಹೊಲಗೇರಿ ಗ್ರಾಮ ಪಂಚಾಯಿತಿಯ ಜೊತೆಗೆ ಹಿರೇಮಠ ಅವರ ನರಗುಂದದಲ್ಲಿರುವ ನಿವಾಸದ ಮೇಲೂ ದಾಳಿ, ಪರಿಶೀಲನೆ.
ಹೂಲಗೇರಿಯಲ್ಲಿ ಪಿಡಿಒ ಎಸ್​ಪಿ ಹಿರೇಮಠ ಐಷಾರಾಮಿ‌ ಮನೆ ಮೇಲೂ ದಾಳಿ. ಇಲ್ಲಿ ಪತ್ತೆಯಾದ ನಗದು ನೋಟು ಎಣಿಸಲು ಹಣ ಎಣಿಸುವ ಮಷಿನ್ ಅನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ.

ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಜಿಪಂ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಅವರ ಮನೆ ಮೇಲೆ ಲೋಕಾ ದಾಳಿ ನಡೆದಿದೆ…

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend