ಜ.10 ರಿಂದ 18 ದಿನಗಳ ಕಾಲ ಕಟ್ಟು ಪದ್ದತಿಯಲ್ಲಿ ನೀರು: ಎನ್ ಚಲುವರಾಯಸ್ವಾಮಿ
ಕೆ.ಆರ್.ಎಸ್ ನಿಂದ ಬೆಳೆಗಳಿಗೆ ಜನವರಿ 10 ರಿಂದ 18 ದಿನಗಳು ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕೆ.ಆರ್.ಎಸ್ ನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಜನವರಿ 10 ರಿಂದ 18 ದಿನಗಳ ಕಾಲ ನೀರು ಹರಿಸಲಾಗುವುದು. 12 ದಿನಗಳ ಕಾಲ ನೀರು ನಿಲುಗಡೆ ಇದೇ ರೀತಿ ನಾಲ್ಕು ಬಾರಿ ನೀರು ನೀಡಲಾಗುವುದು ಎಂದರು.
ಜಿಲ್ಲೆಯ ಮಳವಳ್ಳಿ ಹಾಗೂ ಮದ್ದೂರು ತಾಲ್ಕೂಕಿನ ಕೊನೆಯ ಭಾಗಕ್ಕೂ ನೀರು ಹರಿಸಲಾಗುವುದು. ರೈತರು ಅಲ್ಪವಧಿ ಬೆಳೆಗಳ ನಾಟಿ ಕೆಲಸವನ್ನು ಪ್ರಾರಂಭಿಸಬೇಕು ಎಂದರು.
ಕೃಷಿ ಹಾಗೂ ನೀರಾವರಿ ಇಲಾಖೆ ಸಹಕಾರದೊಂದಿಗೆ ರೈತರು ಎರಡು ಬೆಳೆಗಳನ್ನು ಬೆಳೆಯಬೇಕು. ಇಲಾಖೆಗಳು ನೀಡುವ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಿ ಎಂದರು.
156 ದಿನ ಅಣೆಕಟ್ಟಿನಲ್ಲಿ 124.48 ಅಡಿ ನೀರು
ಇತಿಹಾಸದಲ್ಲಿ ಇದೇ ಮೊದಲು 92 ವರ್ಷಗಳ ನಂತರ 156 ದಿನಗಳ ಕಾಲ ಕೆ.ಆರ್.ಎಸ್. ಅಣೆಕಟ್ಟು 124.48 ಅಡಿ ತುಂಬಿದೆ. ಇದು ಟೀಕೆ ಟಿಪ್ಪಣಿ ಮಾಡುವವರಿಗೆ ಉತ್ತರ ನೀಡಿದೆ. ಜುಲೈ ಮಾಹೆಯಿಂದ ಡಿಸೆಂಬರ್ ಮಾಹೆಯವರೆಗೂ ಬೆಳೆಗಳಿಗೆ ನಿರಂತರವಾಗಿ ನೀರು ನೀಡಲಾಗಿದೆ ಎಂದರು.
ಹೊಸ ವರ್ಷ ಹಾಗೂ ಮುಂಬರುವ ಸಂಕ್ರಾಂತಿ ನಾಡಿನ ಜನತೆಗೆ ಒಳಿತು ಮಾಡಲಿ ಎಂದು ಶುಭ ಹರೈಸಿಸರು.
ಸಭೆಯಲ್ಲಿ ವಿಧಾನಸಭಾ ಶಾಸಕರಾದ ಎ.ಬಿ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿಕುಮಾರ್, ಉದಯ್ , ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030