ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಶು ಆರೈಕೆ ಕೇಂದ್ರ ಉದ್ಘಾಟನೆ…!!!

ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಶು ಆರೈಕೆ ಕೇಂದ್ರ ಉದ್ಘಾಟನೆ

ಮಂಡ್ಯ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಭೃಂಗೇಶ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಶು ಆರೈಕೆ ಕೇಂದ್ರ ಹಾಗೂ ಪಾರ್ಕಿಂಗ್ ಆವರಣವನ್ನು ಉದ್ಘಾಟಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಜಿಲ್ಲೆ , ವಕೀಲರ ಸಂಘ ಮಂಡ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಹಾಗೂ ಪೋಲೀಸ್ ಇಲಾಖೆ ಮಂಡ್ಯ, ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿಶು ಆರೈಕೆ ಕೇಂದ್ರ ಹಾಗೂ ಪಾರ್ಕಿಂಗ್ ಆವರಣದ ಉದ್ಘಾಟನಾ ಸಮಾರಂಭ ಮಂಡ್ಯ ನಗರದಲ್ಲಿರುವ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಇತ್ತೀಚೆಗೆ ಕಾರ್ಯಕ್ರಮ ನಡೆಯಿತು.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಸತ್ರ ನ್ಯಾಯಧೀಶರು ಮಾತನಾಡಿ ಬಹಳ ದಿನಗಳಿಂದ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ನ್ಯಾಯಾಲಯದ ಆವರಣದಲ್ಲಿ ತೆರೆಯುವ ಆಲೋಚನೆಯೊಂದಿಗೆ ಇಂದು ಎಲ್ಲರ ಸಹಕರದಿಂದ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ವಕೀಲರು, ನ್ಯಾಯಾಧೀಶರು , ಪೊಲೀಸರು , ಕಕ್ಷಿದಾರರು , ಸಿಬ್ಬಂದಿವರ್ಗದವರಿಗೆ ಯಾವಾಗ ಹೇಗೆ ಅರೋಗ್ಯ ಸಮಸ್ಯೆ ಬರುತ್ತದೆ ಎಂಬ ಸುಳಿವಿರುವುದಿಲ್ಲ ಅಂತ ಸಂದರ್ಭದಲ್ಲಿ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದಿಂದ ಆರಂಭಿಸಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ , ಡಿ.ಹೆಚ್.ಓ ಡಾ.ಮೋಹನ್ , ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ , ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರುಗಳಾದ ನಿರ್ಮಲ, ಮಂಜುಳಾ ಇಟ್ಟಿ, ಶೀಲಾ, ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾದ ನಾಗರಾಜು , ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಆನಂದ್ , ವಕೀಲರ ಸಂಘದ ಅಧ್ಯಕ್ಷರಾದ ರಾಜೇಂದ್ರ , ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು , ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಹಾಜರಿದ್ದರು…

Leave a Reply

Your email address will not be published. Required fields are marked *