ಡಾ.ವೀರೇಂದ್ರ ಹೆಗಡೆ ಅವರ ಜನ್ಮದಿನಾಚರಣೆ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ…!!!

Listen to this article

ಡಾ.ವೀರೇಂದ್ರ ಹೆಗಡೆ ಅವರ ಜನ್ಮದಿನಾಚರಣೆ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ

ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆಯವರ ಜನ್ಮದಿನದ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಕಾರ್ಯಕ್ರಮವನ್ನು ಸಸಿ ನೆಟ್ಟು ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು,ವನಸಿರಿ ಫೌಂಡೇಶನ್ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪುರವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆಯವರು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.ಬಡವರಿಗೆ, ದೀನ ದಲಿತರಿಗೆ ಆರ್ಥಿಕವಾಗಿ ಸಬಲೀಕರಣ ಹೊಂದಲು, ಮಹಿಳೆಯರಿಗಾಗಿ ಬದುಕನ್ನು ಕಟ್ಟಿಕೊಳ್ಳಲು ಸ್ವ ಸಹಾಯ ಸಂಘಗಳ ಮೂಲಕ ಹಲವಾರು ರೀತಿಯ ಸವಲತ್ತುಗಳನ್ನು ನೀಡಿ ಪ್ರೋತ್ಸಾಹಿಸುತ್ತಿದ್ದಾರೆ. ಇವರ ಗ್ರಾಮೀಣ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು,ಶಿಕ್ಷಣಕ್ಕಾಗಿ ಮಂಜುನಾಥೇಶ್ವರ ಸಂಶೋಧನಾ ಕೇಂದ್ರಸ್ಥಾಪನೆ, ಆರೋಗ್ಯ ಕೇಂದ್ರಗಳ ಸ್ಥಾಪನೆ, ಸಾಮೂಹಿಕ ವಿವಾಹ ಕಾರ್ಯಕ್ರಮ ಇನ್ನಿತರ ಹಲವಾರು ರೀತಿಯ ಕಾರ್ಯಗಳನ್ನು ಕೈ ಕೊಳ್ಳುತ್ತಿರುವುದು ಸಮಾಜವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ.ಇಂತಹ ಗಣ್ಯ ವ್ಯಕ್ತಿಗಳನ್ನು ನಾವು ನೀವುಗಳೆಲ್ಲರೂ ಗೌರವಿಸೋಣ ಇಂಥ ವ್ಯಕ್ತಿಗಳ ಜನ್ಮದಿನಾಚರಣೆಯನ್ನು ಇನ್ನು ವಿಶಿಷ್ಟವಾಗಿ ಆಚರಿಸಲು ಇಂದು ನಮ್ಮ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ಮೂಲಕ ಇಲ್ಲಿ ನೆಟ್ಟಿರುವ ಸಸಿಗಳನ್ನು ಅವರ ಹೆಸರಿನಲ್ಲಿ ನೀಡುತ್ತಿದ್ದೇವೆ ಇವುಗಳನ್ನು ಉಳಿಸಿ ಬೆಳೆಸುವುದು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಹುಟ್ಟು ಹಬ್ಬಗಳನ್ನು ಸಮಾಜಮುಖಿ ಕಾರ್ಯಗಳನ್ನು ಮಾಡುವುದರೊಂದಿಗೆ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಗಳನ್ನು ಕೈಗೊಳ್ಳಬೇಕು.ಯಾಕಂದರೆ ಹುಟ್ಟುಹಬ್ಬ ನೆಪ ಮಾತ್ರಕ್ಕೆ ಆದರೆ ಸಸ್ಯಗಳು ಮುಂದಿನ ಪೀಳಿಗೆಗೆ ಶುದ್ಧವಾದ ಗಾಳಿ ಆಹಾರ ಒದಗಿಸುವುದರ ಜೊತೆ ಜೊತೆಗೆ ಪರಿಸರ ಸಮತೋಲನವನ್ನು ಕಾಪಾಡುತ್ತವೆ ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಹುಟ್ಟು ಹಬ್ಬದ ಅಂಗವಾಗಿ ಸಸಿಗಳನ್ನು ನೆಡಲು ಮುಂದಾಗಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ವೆಂಕಟೇಶ್ ಚವಾಣ್, ಶಂಕರಗೌಡ ಎಲೆಕೂಡ್ಲಿಗಿ , ರಂಜಾನ್ ಸಾಬ್, ಮುದಿಯಪ್ಪ, ಯೋಜನಾಧಿಕಾರಿಗಳಾದ ಶೇಖರ ಶೆಟ್ಟಿ, ಮೇಲ್ವಿಚಾರಕರಾದ ತೋಟಯ್ಯ,ಲೆಕ್ಕ ಪರಿಶೋಧಕರಾದ ನಿಂಗಪ್ಪ, ಸುಜಾತಾ, ಸೇವಾಪ್ರತಿನಿಧಿಗಳಾದ ಗೌತಮಿ,ಹೇಮಾ,ಜ್ಯೋತಿ,Vle ಆದ ವಿರುಪಾಕ್ಷಿ ಇನ್ನಿತರರು ಇದ್ದರು…

ವರದಿ. ಲಿಂಗರಾಜ್ ತಡಕಲ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend