ತಹಶೀಲ್ದಾರ್ ಕಾರ್ಯಾಲಯದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರದಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.ಷಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಸಿಲ್ದಾರ್ ಸುರೇಶ್ ಕುಮಾರ್ ಮಾತನಾಡುತ್ತಾ ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬರು ಅನುಕರಣೆ ಮಾಡುವ ಮನೋಭಾವನೆ ಹೊಂದುವಂತಾಗಬೇಕು. ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣ ರಾಜಕೀಯ ಮತ್ತು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದು ತಿಳಿಸಿದರು…
ವರದಿ. ಮಂಜುನಾಥ್. ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030