ರಾಯಚೂರು ಜಿಲ್ಲಾ ಕಾರ್ಯಾಲಯದಲ್ಲಿಂದು ಆಯೋಜಿಸಿದ್ದ ಪಕ್ಷದ ಸದಸ್ಯತಾ ಅಭಿಯಾನದ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಲಾಯಿತು. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಜಗತ್ತಿನ ಐದನೇ ಆರ್ಥಿಕ ಸದೃಢ ರಾಷ್ಟ್ರವನ್ನಾಗಿಸಿ ಕೆಲ ದಿನಗಳಲ್ಲೇ ಮೂರನೇ ಸದೃಢ ರಾಷ್ಟ್ರವನ್ನಾಗಿಸಲು ಶ್ರಮಿಸುತ್ತಿರುವ ನಮ್ಮ ಪಕ್ಷಕ್ಕೆ ಜನಸಾಮಾನ್ಯರ ಬೆಂಬಲ ವ್ಯಾಪಕವಾಗಿದೆ. ಸೆಪ್ಟೆಂಬರ್ 2 ರಿಂದ ಆರಂಭವಾಗಲಿರುವ ಸದಸ್ಯತಾ ಅಭಿಯಾನವನ್ನು ದಾಖಲೆಯ ಪ್ರಮಾಣದಲ್ಲಿ ಅದರಲ್ಲೂ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸದಸ್ಯತ್ವ ನೊಂದಣಿ ಆಗುವ ನಿಟ್ಟಿನಲ್ಲಿ ವಿರಮಿಸದೇ ಶ್ರಮಿಸಬೇಕೆಂದು ಮಾನ್ಯ ಶಾಸಕರಾದ ಶ್ರೀ ಶಿವರಾಜ್ ಪಾಟೀಲ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು, ವಿವಿಧ ಮೋರ್ಚಾ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು…..
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030