ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ರಾಯಚೂರು ಜಿಲ್ಲಾ ಘಟಕದಿಂದ ಪ್ರತಿಭಟನೆ…
ರಾಯಚೂರು
ಇತ್ತೀಚಿನ ದಿನಗಳಲ್ಲಿ ರೈತರಿಗೆ ತಾವುಗಳು ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಂಬಲ ಬೆಲೆ ಇಲ್ಲದೆ ಸಾಕಷ್ಟು ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ ಇದರಿಂದ ಜಗತ್ತಿಗೆ ಅನ್ನ ನೀಡು ತಕ್ಕಂತಹ ರೈತರು ಆತ್ಮಹತ್ಯೆಗೆ ಬಲಿಯಾಗುತ್ತಿದ್ದಾರೆ ಆದಕಾರಣ ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ಬೆಂಗಳೂರು , ಅಖಿಲ ಕರ್ನಾಟಕ ರಾಜ್ಯ ಮಹಿಳಾ ರೈತ ಸಂಘ, ಹಸಿರು ಸೇನೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ರಾಯಚೂರು ಜಿಲ್ಲಾ ಘಟಕದಿಂದ ಬೆಳಿಗ್ಗೆ 11 ಗಂಟೆಗೆ ಡಾ: ಬಾಬಾ ಸಾಹೇಬ್ ಬಿ.ಆರ್ ಅಂಬೇಡ್ಕರ್ ಸರ್ಕಲ್ ಇಂದ ಪಾದಯಾತ್ರೆ ಕೈಗೊಂಡು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ತೆರಳಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಹತ್ತಿ, ಮೆಣಸಿನಕಾಯಿ, ಭತ್ತ, ತೊಗರಿ, ಶೇಂಗಾ ಬೆಳೆಗಳಿಗೆ ಸೂಕ್ತವಾದ ಬೆಲೆಗಳನ್ನು ನೀಡಬೇಕಾಗಿ ಎಂದು ರೈತ ಮುಖಂಡರು ಹಾಗೂ ಸಾವಿರಾರು ರೈತರು ಮನವಿ ಪತ್ರವನ್ನು ನೀಡಲಿದ್ದಾರೆ ಈ ಸಂದರ್ಭದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕಾಗಿ ಎಂದು ರೈತ ಮುಖಂಡರಾದ ಸಾಜಿದ್ ಹುಸೇನ್ ರವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ….
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030