ಮಾಧ್ಯಮದವರ ಮೇಲೆ ಪೊಲೀಸ್ ಬಲಪ್ರಯೋಗಕ್ಕೆ ಧಿಕ್ಕಾರ..
ಇವರಿಗೆ,
ಶ್ರೀ ಲಕ್ಷ್ಮೀಕಾಂತ ರೆಡ್ಡಿ
ಮಾನ್ಯ ಜಿಲ್ಲಾಧಿಕಾರಿಗಳು,
ಮೈಸೂರು ಜಿಲ್ಲೆ.
ಇಂದ,
ಕೆ.ದೀಪಕ್
ಅಧ್ಯಕ್ಷರು,
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ
ಮೈಸೂರು.
ಮಾನ್ಯರೇ
ವಿಷಯ : ದಸರಾ ಜಂಬೂ ಸವಾರಿ ಸಂದರ್ಭದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ದುಂಡಾವರ್ತನೆ ಎಸಗಿದ ಪೊಲೀಸ್ ಸಿಬ್ಬಂದಿಗಳ ಅಮಾನತ್ತಿಗೆ ಒತ್ತಾಯ :-
ನಾಡಹಬ್ಬ ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಅಕ್ಷರ ಸಹ ಗೂಂಡಗಳಂತೆ ವರ್ತಿಸಿ, ವಿಜಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕರಾದ ಶ್ರೀ ಹೆಚ್.ಕೆ. ಚಂದ್ರು ಅವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವುದು ಖಂಡನೀಯ.
ವಿಶ್ವ ವಿಖ್ಯಾತ ದಸರಾ ಉತ್ಸವದ ಯಶಸ್ವಿಗೆ ಕಳೆದ ಎರಡು ತಿಂಗಳಿನಿಂದ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳನ್ನು ಪೊಲೀಸ್ ಸಿಬ್ಬಂದಿಗಳು ಅಮಾನವೀಯವಾಗಿ ನಡೆಸಿಕೊಂಡಿರುವುದು ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಶೋಭೆ ತರುವ ವಿಷಯವಲ್ಲ. ಇದು ಮಾಧ್ಯಮ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ. ಈ ಕೃತ್ಯವನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಉಗ್ರವಾಗಿ ಖಂಡಿಸುತ್ತದೆ.
ಆದ್ದರಿಂದ ಜಂಬೂಸವಾರಿಯ ದಿನ ಅರಮನೆಯ ಆವರಣದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿಗಳನ್ನು ಕೂಡಲೆ ಅಮಾನತ್ತುಗೊಳಿಸಿ ಶಿಸ್ತು ಕ್ರಮ ಜರುಗಿಸಬೇಕಾಗಿ ಒತ್ತಾಯ. ಒಂದು ವೇಳೆ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಮಾಧ್ಯಮದ ಪ್ರತಿನಿಧಿಗಳು ಪ್ರತಿಭಟನೆಯ ಮೂಲಕ ನ್ಯಾಯ ಕಂಡುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ತಿಳಿಸಲು ಭಯಸುತ್ತೇವೆ.
ವಂದನೆಗಳೊಂದಿಗೆ
ಕೆ.ದೀಪಕ್
ಪ್ರತಿ :
ಶ್ರೀ ಸಿದ್ದರಾಮಯ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು,
ಕರ್ನಾಟಕ ಸರಕಾರ.
ಡಾ.ಹೆಚ್. ಸಿ. ಮಹಾದೇವಪ್ಪ
ಮಾನ್ಯ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು.
ಡಾ. ಜಿ.ಪರಮೇಶ್ವರ್
ಮಾನ್ಯ ಗೃಹ ಸಚಿವರು
ಕರ್ನಾಟಕ ಸರಕಾರ.
ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೋ ತುಣಕು ಮತ್ತು ಛಾಯಾಚಿತ್ರವನ್ನು ಇದರೊಂದಿಗೆ ರವಾನಿಸಿದ್ದೇನೆ….
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030