ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ…!!!

Listen to this article

ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ

ವಿಜಯಪುರ, : ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಪಟಾಕಿ ಮಾರಾಟಗಾರರು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಜಿಲ್ಲೆಯ ವಿವಿಧ ಪಟಾಕಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರು ಜಂಟಿ ಸಮೀಕ್ಷಾ ನಡೆದ ಪರವನಿಗೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ಪ್ರತ್ಯೇಕ ಜಾಗ ಗುರುತಿಸಬೇಕು. ಎಲ್ಲಾ ವ್ಯಾಪಾರಸ್ಥರು ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಂಡು ಪರವಾನಿಗೆಗೆ ಸಂಬಂಧಿಸಿದ ಅಧಿಕಾರಿಗಳು ಶಿಫಾರಸ್ಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಬಗ್ಗೆ ನಾಳೆಯೇ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು ಪಟಾಕಿ ವ್ಯಾಪಾರಸ್ಥರ ಸಭೆ ನಡೆಸಿ ಬೆಂಕಿ-ಅವಘಡಗಳು ಸಂಭವಿಸದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಅಗತ್ಯ ಸೂಚನೆಗಳನ್ನು ನೀಡುವಂತೆ ಅವರು ಸೂಚನೆ ನೀಡಿದರು.

ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಪರವಾನಿಗೆ ನೀಡಲಾಗುವುದು. ಅಂಗಡಿಗಳಲ್ಲಿ ಅಗತ್ಯಕ್ಕಿಂತ ಜಾಸ್ತಿ ಪ್ರಮಾಣದಲ್ಲಿ ಪಟಾಕಿಗಳ ಸಂಗ್ರಹಣೆ ಮಾಡಕೂಡದು. ಬೆಂಕಿ ಅವಘಡ ಸಂಭವಿಸದಂತೆ, ಮರಳು, ನೀರು, ಅಗ್ನಿ ನಿರೋಧಕ ಮುಂಜಾಗೃತ ಕ್ರಮಗಳನ್ನು ಅಳವಡಿಸಿಕೊಂಡಿರುವ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಸಂಬಂಧಿಸಿದ ತಹಶೀಲ್ದಾರರು ಪರವಾನಿಗೆಗೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಪಟಾಕಿ ಅಂಗಡಿಗಳಿಗೆ ಗುರುತಿಸಿದ ಪ್ರದೇಶಗಳಲ್ಲಿ ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ನೋಡಿಕೊಳ್ಳಬೇಕು. ಸಂತೆ, ಶಾಲೆ, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಪಟಾಕಿ ಅಂಗಡಿ ಹಾಕದಂತೆ ನೋಡಿಕೊಳ್ಳಬೇಕು. ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಹಸಿರು ಪಟಾಕಿ ಸಿಡಿಸಲು ಅವಕಾಶ ಇದ್ದು, ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ  ಪೋಲೀಸ್ ವರಿಷ್ಟಧಿಕಾರಿ ಪ್ರಸನ್ನ ದೇಸಾಯಿ, ವಿಜಯಪುರ ಉಪವಿಭಾಗಾಧಿಕಾರಿ, ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend