ರಕ್ತದಾನ ನಕಾರಾತ್ಮಕ ಭಾವನೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ: ಪ್ರೊ ಜಗನ್ನಾಥ್ ಕೆ ಡಾಂಗೆ
ಶಿವಮೊಗ್ಗ ನಗರದ ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಕೊರತೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಸೆಂಟರ್ ಇವರು ಜನ ಹಿತ ಸಭಾ, ಶಿವಮೊಗ್ಗ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಅಲ್-ಮಹಮೂದ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ ೧೩-೧೧-೨೦೨೪ ರ ಬುಧವಾರದಂದು ರಕ್ತದಾನ ಶಿಬಿರವನ್ನು ಹಮ್ಮಿಕೊಡಿದ್ದರು. ಈ ಶಿಬಿರಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಜಗನ್ನಾಥ್ ಕೆ ಡಾಂಗೆ ಮಾತನಾಡಿ ರಕ್ತದಾನ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಭಾವನಾತ್ಮಕ ಯೋಗಕ್ಷೇಮವನ್ನು ಸುಧಾರಿಸಿತ್ತದೆ ಜೊತೆಗೆ ನಕಾರಾತ್ಮಕ ಭಾವನೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಶಿಬಿರದಲ್ಲಿ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ಮಧು ಜಿ ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ಸಿದ್ದರಾಜು ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಜೊತೆಗೆ ಅಲ್-ಮಹಮೂದ್ ಶಿಕ್ಷಣ ಮಹಾವಿದ್ಯಾಲಯದ ಅನೇಕ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಸೆಂಟರ್ ನ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ಅಪ್ಪಾಜಿ, ೧೧೬ ಬಾರಿ ರಕ್ತದಾನ ಮಾಡಿದ ಶ್ರೀ ಧರಣೇಂದ್ರ ದಿನಕರ್, ಪಿ ಆರ್ ಓ ಶ್ರೀಮತಿ ಶ್ರುತಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಜನ ಹಿತ ಸಭಾ ಉಪಾಧ್ಯಕ್ಷ ಶ್ರೀ ದೇವರಾಜ, ಕಾರ್ಯದರ್ಶಿ ಶ್ರೀಮತಿ ರತ್ನ ಜೆ ಡಾಂಗೆ ಮತ್ತು ವಿವಿಧ ಜಿಲ್ಲೆಗಳ ಸಂಚಾಲಕರು ಹಾಜರಿದ್ದರು. ಅಲ್-ಮಹಮೂದ್ ಶಿಕ್ಷಣ ಮಹಾವಿದ್ಯಾಲಯದ ಆಡಳಿತಾಧಿಕಾರಿ ಶ್ರೀ ಅಬ್ದುಲ್ ಅಹದ್, ಪ್ರಾಂಶುಪಾಲರಾದ ಡಾ ಸೋಮಶೇಖರ ಎಂ ಮತ್ತು ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು…
ವರದಿ. ಸೋಮಶೇಖರ್ ಶಿವಮೊಗ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030