ಮಕ್ಕಳು ದೇಶದ ಸಂಪತ್ತು: ಡಾ. ರಾಕೇಶ್ ಎಸ್ ಪಿ
ದಿನಾಂಕ 14-11-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಗಳು ಹಾಗೂ ಬಿ. ಇಡಿ ವಿಭಾಗದ ಪ್ರಾಂಶುಪಾಲರಾದ ಡಾ. ರಾಕೇಶ್.ಎಸ್.ಪಿ. ಯವರು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಂಗ್ಲ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ. ಸುರಭಿ. ಬಿ. ಎಲ್ ಇವರು ವಹಿಸಿದ್ದರು ಮತ್ತು ಮುಖ್ಯ ಅತಿಥಿಗಳಾಗಿ ಕನ್ನಡ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ.ರೇವತಿ. ವಿ.ಎಸ್., ಆಂಗ್ಲ 7ನೇ ತರಗತಿ ವಿದ್ಯಾರ್ಥಿನಿ ಆಕೃತಿ ಕುಮಾರಿ. ಎಂ , ಕನ್ನಡ 7ನೇ ತರಗತಿ ವಿದ್ಯಾರ್ಥಿನಿ ಶ್ರೀದೇವಿ.ಎಸ್ ವೇದಿಕೆ ಮೇಲೆ ಉಪಸ್ಥಿತರಿದ್ದರು ಹಾಗೂ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ವಿದ್ಯಾ ಸಂಸ್ಥೆಯ ವಿವಿಧ ವಿಭಾಗಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಿವಲಿಂಗಗೌಡ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು , ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆ ಯನ್ನು ಬಿಡಿ ವಿಭಾಗದ ಪ್ರಶಿಕ್ಷಣಾರ್ಥಿಯಾದ ಕುಮಾರಿ.ಸಂಭ್ರಮ.ಹೆಚ್.ಎಸ್, ಪ್ರಾರ್ಥನೆಯನ್ನು ಕುಮಾರಿ. ನೀಲಾ. ಎಂ.ಟಿ , ಸ್ವಾಗತವನ್ನು ಕುಮಾರಿ. ಸ್ಪೂರ್ತಿ.ಕೆ ಹಾಗೂ ವಂದನಾರ್ಪಣೆಯನ್ನು ಶ್ರೀಮತಿ. ನಾಗರತ್ನ. ಬಿ ಇವರು ನೆರವೇರಿಸಿದರು…
ವರದಿ… ಸೋಮಶೇಖರ್ ಶಿವಮೊಗ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030