ವಿಪತ್ತು ನಿರ್ವಹಣಾ ತರಬೇತಿ
ಶಿವಮೊಗ್ಗ : ಹಾನಗಲ್ ಶ್ರೀ ಕುಮಾರ ಮಹಾಸ್ವಾಮಿಗಳ ಸಭಾಭವನ ಶಿವಮೊಗ್ಗ ಇಲ್ಲಿ ಅಂಗವಿಕಲ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಪತ್ತು ನಿರ್ವಹಣಾ ತರಬೇತಿಯನ್ನು ಏರ್ಪಡಿಸಲಾಗಿತ್ತು.
ಈ ತರಬೇತಿಯನ್ನು ಎನ್ ಡಿ ಆರ್ ಎಫ್ ತಂಡದ ಇನ್ಸ್ಪೆಕ್ಟರ್ ಆದ ಶಾಂತಿ ಲಾಲ್ ಜಾಟಿಯ ಅವರು ನಡೆಸಿಕೊಟ್ಟಿರುತ್ತಾರೆ. ಶಿವಮೊಗ್ಗ, ಭದ್ರಾವತಿ ತಾಲೂಕು ತಾಲ್ಲೂಕು ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಗೋಪಿನಾಥ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಸುಮಾರು ನೂರು ಜನ ಶಿಬಿರಾರ್ಥಿಗಳು ಹಾಜರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030